ಮಂಗಳೂರಿಗೂ ಬಂತು ಬೆಲೆಬಾಳುವ ನಿಷೇಧಿತ ಮಾದಕ ವಸ್ತು MDMA ► ಲಕ್ಷಾಂತರ ಮೌಲ್ಯದ 90 ಗ್ರಾಂ MDMA ಸಹಿತ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.27. ಬೆಲೆಬಾಳುವ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಾಟಿಪಳ್ಳ ನಿವಾಸಿ ಟಿ.ಅಬ್ದುಲ್ ಖಾದರ್ ಎಂಬವರ ಪುತ್ರ ಮಹಮ್ಮದ್ ಶಾಫಿ(32) ಎಂದು ಗುರುತಿಸಲಾಗಿದೆ. ಆರೋಪಿಯು ನಿಷೇಧಿತ ಮಾದಕ ವಸ್ತುವಾದ (Methylene dioxy methamphetamine) MDMA ಯನ್ನು ಮುಂಬೈಯಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿನಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ದೊರೆತ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 90 ಗ್ರಾಂ ತೂಕದ 3,15,000/- ಮೌಲ್ಯದ ಬೆಲೆಬಾಳುವ ನಿಷೇಧಿತ ಮಾದಕ ವಸ್ತುವನ್ನು ವಶಪಡಿಸಿಕೊಂಡು ಮುಂದಿನ ಕ್ರಮಕ್ಕಾಗಿ ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

Also Read  ಅಕ್ರಮ ಮರಳುಗಾರಿಕೆ ಮತ್ತು ಸಾಗಾಟಕ್ಕೆ ಕಡಿವಾಣ

error: Content is protected !!
Scroll to Top