ಕಡಬ: ಪಿಕಪ್ ಗೆ ಹಿಂದಿನಿಂದ ದ್ವಿಚಕ್ರ ವಾಹನ ಢಿಕ್ಕಿ ► ಸುಬ್ರಹ್ಮಣ್ಯ ಕಾಲೇಜಿನ ವಿದ್ಯಾರ್ಥಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಅ.01. ಪಿಕಪ್ ಗೆ ಹಿಂದಿನಿಂದ ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಕೃಷ್ಣನಗರ ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಕಡಬದಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನವನ್ನು ಪರಿಚಯಸ್ಥರನ್ನು ಕರೆದುಕೊಳ್ಳುವ ಸಲುವಾಗಿ ನಿಲ್ಲಿಸಿದ್ದು, ಹಿಂದಿನ ತೆರಳುತ್ತಿದ್ದ ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸುಬ್ರಹ್ಮಣ್ಯದ ಕಾಲೇಜು ವಿದ್ಯಾರ್ಥಿ ಕೊಣಾಜೆ ಗ್ರಾಮದ ಕಲ್ಲೂರು ನಿವಾಸಿ ಎಲ್ಯಣ್ಣ ಗೌಡ ಎಂಬವರ ಪುತ್ರ ಮೋಹನ್ ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top