ಬಂಟ್ವಾಳ: ಕೆಎಸ್ಸಾರ್ಟಿಸಿ ಬಸ್ – ಬೈಕ್ ಢಿಕ್ಕಿ ► ಸವಾರರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.07. ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಮೃತಪಟ್ಟ ದಾರುಣ ಘಟನೆ ಮಂಗಳೂರು – ಧರ್ಮಸ್ಥಳ ರಾಷ್ಟ್ರೀಯ ಹೆದ್ದಾರಿಯ ಜಕ್ರಿಬೆಟ್ಟು ಎಂಬಲ್ಲಿ ಭಾನುವಾರದಂದು ನಡೆದಿದೆ.

ಮೃತ ಸವಾರರನ್ನು ಬಂಟ್ವಾಳ ವಾಮದಪದವು ನಿವಾಸಿ ಮುಹಮ್ಮದ್ ನೌಶಾದ್ (18) ಹಾಗೂ ಮಂಗಳೂರಿನ ಕುಡುಪು ನಿವಾಸಿ ಚರಣ್(18) ಎಂದು ಗುರುತಿಸಲಾಗಿದೆ. ಮೃತರಿಬ್ಬರು ಭಾನುವಾರದಂದು ಬಿ.ಸಿ.ರೋಡಿನಿಂದ ಧರ್ಮಸ್ಥಳ ರಸ್ತೆಯಲ್ಲಿ ಕಾರಿಂಜ ಕಡೆಗೆ ತೆರಳುತ್ತಿದ್ದಾಗ ಜಕ್ರಿಬೆಟ್ಟು ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ. ಪರಿಣಾಮ ಸವಾರರಿಬ್ಬರು ಬಸ್ ನ ಅಡಿಯಲ್ಲಿ ಸಿಲುಕಿಕೊಂಡಿದ್ದು, ಸ್ಥಳೀಯರು ಆಂಬ್ಯುಲೆನ್ಸ್ ಮೂಲಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಬೆಳ್ತಂಗಡಿ: ವಿಭಿನ್ನ ಶೈಲಿಯಲ್ಲಿ ಪ್ರಚಾರ ಮಾಡಿದ ಕೈ ಅಭ್ಯರ್ಥಿ ರಕ್ಷಿತ್ ಶಿವರಾಂ

error: Content is protected !!
Scroll to Top