ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ ‘ಕದಂಬೋತ್ಸವ – 2018’ರ ಸಮಾರೋಪದ ಹಿನ್ನೆಲೆ ► ಇಂದು ರಾತ್ರಿ ಕಡಬದ ಅನುಗ್ರಹ ಹಾಲ್‌ನಲ್ಲಿ ಕೆಎಸ್ಎಸ್ ವಿದ್ಯಾರ್ಥಿಗಳಿಂದ ‘ನೃತ್ಯ ವೈಭವ’

(ನ್ಯೂಸ್ ಕಡಬ) newskadaba.com ಕಡಬ, ಅ.07. ಜೇಸಿಐ ಕಡಬ ಕದಂಬ ಮತ್ತು ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್(ರಿ.)ನ ಜೇಸಿ ಸಪ್ತಾಹ ‘ಕದಂಬೋತ್ಸವ-2018’ ರ ಸಮಾರೋಪ ಸಮಾರಂಭವು ಭಾನುವಾರ ಸಂಜೆ 6.30 ಕ್ಕೆ ಸರಿಯಾಗಿ ಕಡಬದ ಅನುಗ್ರಹ ಸಭಾಭವನದಲ್ಲಿ ನಡೆಯಲಿದೆ.

ಜೇಸಿಐ ಭಾರತದ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ರಾಷ್ಟ್ರೀಯ ನಿರ್ದೇಶಕರಾದ ಚಂದ್ರಶೇಖರ್ ನಾಯರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ‌. ಜೇಸಿಐ ಕಡಬ ಕದಂಬದ ಘಟಕಾಧ್ಯಕ್ಷರಾದ ವೆಂಕಟೇಶ್ ಪಾಡ್ಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಜೇಸಿಐ ಭಾರತದ ವಲಯ 15 ರ ಉಪಾಧ್ಯಕ್ಷರಾದ ರವಿ ಕಕ್ಕೆಪದವು, ವಲಯಾಧಿಕಾರಿ ಶಿವಪ್ರಸಾದ್ ರೈ ಮೈಲೇರಿ, ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ನಾಗರಾಜ್ ಎನ್‌.ಕೆ.ಯವರ ಉಪಸ್ಥಿತಿಯಲ್ಲಿ ಮಂಗಳೂರಿನ ಎ.ಜೆ.ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕ ಗಣೇಶ್ ಪಿಜಕ್ಕಳರವರಿಗೆ
‘ಕದಂಬ ಶ್ರೀ – 2018’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಬಳಿಕ ಸುಬ್ರಹ್ಮಣ್ಯದ ಕೆ.ಎಸ್.ಎಸ್. ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ‘ನೃತ್ಯ ವೈಭವ’ ಮನೋರಂಜನಾ ಕಾರ್ಯಕ್ರಮ ನಡೆಯಲಿದ್ದು, ಸರ್ವರೂ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಘಟಕದ ಪ್ರಕಟಣೆ ತಿಳಿಸಿದೆ.

Also Read  ಉಳ್ಳಾಲ: ಅಂತರಾಜ್ಯ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ    ➤ 30 ಲಕ್ಷ ರೂ. ಮೌಲ್ಯದ ಸೊತ್ತು ಕಳವು

error: Content is protected !!
Scroll to Top