ಐತಿಹಾಸಿಕ ಮೈಸೂರು ದಸರಾಗೆ ಸಂಭ್ರಮದ ಚಾಲನೆ

(ನ್ಯೂಸ್ ಕಡಬ) newskadaba.com ಮೈಸೂರು, ಅ.10. ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾ ಮೂರ್ತಿಯವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಐತಿಹಾಸಿಕ ಮೈಸೂರು ದಸರಾ ಉತ್ಸವಕ್ಕೆ ಬುಧವಾರದಂದು ಚಾಲನೆ ನೀಡಿದರು.

ವಿಶ್ವ ವಿಖ್ಯಾತಿಯನ್ನು ಹೊಂದಿರುವ ಮೈಸೂರು ದಸರಾ ಉತ್ಸವದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಸಂಸ್ಕೃತಿ ಖಾತೆ ಸಚಿವೆ ಡಾ.ಜಯಮಾಲಾ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಮುಂದಿನ ಹತ್ತು ದಿನಗಳ ಕಾಲ ಮೈಸೂರು ನಗರದಲ್ಲಿ ಸಂಭ್ರಮದ ದಸರಾ ನಡೆಯಲಿದ್ದು, ದೇಶ – ವಿದೇಶಗಳಿಂದ ಪ್ರವಾಸಿಗರು ಆಗಮಿಸಲಿದ್ದಾರೆ.

Also Read  ಹಾಸನ: ಜಯದ ನಗೆ ಬೀರಿದ ಜೆಡಿಎಸ್ ➤ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡರನ್ನು ಮಣಿಸಿದ ಸ್ವರೂಪ್

error: Content is protected !!
Scroll to Top