ಕಡಬ ಸರಕಾರಿ ಪದವಿ ಪೂರ್ವ ಕಾಲೇಜು: ವನಮಹೋತ್ಸವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಜು.24. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಡಬ ಬಿ ಒಕ್ಕೂಟ, ,ಕಡಬ ಸರಕಾರಿ ಪದವಿ ಪೂರ್ವ ಕಾಲೇಜ್ ಹಳೇವಿದ್ಯಾಥಿ೯ ಸಂಘ, ಕಡಬ ರಾಷ್ಟ್ರೀಯ ಸೇವಾ ಯೋಜನೆ ಘಟಕ ದ ಸಂಯುಕ್ತ ಆಶ್ರಯ ದಲ್ಲಿ “ವನಮಹೋತ್ಸವ” ಹಾಗೂ ಬೀಜದಉಂಡೆ ಬಿತ್ತೋತ್ಸವ ಕಾರ್ಯಕ್ರಮವು ಕಡಬ ‌ಸರಕಾರಿ ಪದವಿ ಪೂರ್ವ ಕಾಲೇಜ್ ನ‌ ವಠಾರದಲ್ಲಿ ಶನಿವಾರದಂದು ನಡೆಯಿತು.

ಈ ಕಾರ್ಯ ಕ್ರಮದ ಅಧ್ಯಕ್ಷ ತೆಯನ್ನು ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾದ ಸುಂದರ ಗೌಡ ಮಂಡೆಕರ ವಹಿಸಿದ್ದರು. ಸಭಾಕಾರ್ಯ ಕ್ರಮದ ಉದ್ಘಾಟನೆಯನ್ನು ಸರಕಾರಿ ಪದವಿ ಪೂರ್ವ ಕಾಲೇಜ್ ನ ಪ್ರಾಂಶುಪಾಲರಾದ ಜನಾದ೯ನ ಎ. ನೆರವೇರಿಸಿ ಶುಭಹಾರೈಸಿದರು. ಮುಖ್ಯ ಅತಿಥಿಯಾಗಿ ಕಡಬ ವಲಯದ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಗಣೇಶ್ ಕೈಕುರೆ, ಪಂಜ ವಲಯ ಅರಣ್ಯ ರಕ್ಷಕರಾದ ಸುಬ್ರಹ್ಮಣ್ಯ ಗೌಡ, ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ನಾಗರಾಜ್ ಎನ್.ಕೆ., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಲಯ ಮೇಲ್ವಿಚಾರಕರಾದ ಬಾಬು, ಕಡಬ ಸರಕಾರಿ ಪದವಿ ಪೂರ್ವ ಕಾಲೇಜ್ನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ದಯಾನಂದ ಉಂಡಿಲ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಡಬ ಒಕ್ಕೂಟದ ಅಧ್ಯಕ್ಷರಾದ ಆನಂದ ಗೌಡ ಕೋಂಕ್ಯಾಡಿ, ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಶಿವಪ್ರಸಾದ್ ಮೈಲೇರಿ, ಕುಶಾಲಪ್ಪ ಗೌಡ ಕಂಪ, ಸರಕಾರಿ ಪದವಿ ಪೂರ್ವ ಕಾಲೇಜ್‌ನ ಉಪ ಪ್ರಾಂಶುಪಾಲರಾದ ವೇದಾವತಿ ಮುಂತಾದವರು ಉಪಸ್ಥಿತರಿದ್ದು ಸಂದರ್ಭೋಚಿತವಾಗಿ ಮಾತನಾಡಿದರು.

Also Read  ಮಾಜಿ ಸೈನಿಕ, ಮಡಿದ ಯೋಧರ ಅವಲಂಬಿತರಿಗೆ ಗುರುತು ಚೀಟಿ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಡಬ ಬಿ ಒಕ್ಕೂಟದ ಸೇವಾಪ್ರತಿನಿಧಿ ಪುಷ್ಪಾಲತಾ ಸ್ವಾಗತಿಸಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಯ ಕಡಬ ಬಿ ಒಕ್ಕೂಟ ದ ಕಾರ್ಯದರ್ಶಿ ನಳಿನಿ ವಂದಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ಅಧಿಕಾರಿ ಸಲೀನ್ ಕೆ.ವಿ. ಕಾರ್ಯಕ್ರಮ ನಿರೂಪಿಸಿದರು.

error: Content is protected !!
Scroll to Top