ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2018′ ► ಮಾನಸಿಕ ಆರೋಗ್ಯ ಜಾಗೃತಿ ಇಂದಿನ ಅಗತ್ಯ:ಕಾಡ್ಲೂರು ಸತ್ಯನಾರಾಯಣಾಚಾರ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.10. ಮಾಹಿತಿ ತಂತ್ರಜ್ಞಾನಗಳ ವಿನೂತನ ಆವಿಷ್ಕಾರದಿಂದಾಗಿ ಯುವ ಜನಾಂಗ ವ್ಯಸನ ಹಾಗೂ ಖಿನ್ನತೆಗೆ ಒಳಗಾಗುತ್ತಿದ್ದು, ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯವು ಅತಿ ಅಗತ್ಯ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಾಡ್ಲೂರು ಸತ್ಯನಾರಾಯಣಾಚಾರ್ಯ ಹೇಳಿದರು.

ಅವರಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, (ಮಾನಸಿಕ ಆರೋಗ್ಯ ವಿಭಾಗ), ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪೊಲೀಸ್ ಇಲಾಖೆ ಮತ್ತು ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಸ್ಟಡೀಸ್ ಇವರ ಸಹಯೋಗದೊಂದಿಗೆ ಆಯೋಜಿಸಲಾದ ‘ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2018’ ಉದ್ಘಾಟಿಸಿ ಮಾತನಾಡುತ್ತಿದ್ದರು.ಮಾನವ ಸಂಪನ್ಮೂಲದ ಸದ್ಬಳಕೆಗೆ ದೈಹಿಕ ಮತ್ತು ಮಾನಸಿಕ ಆರೋಗ್ಯದ ಅಗತ್ಯವಿದೆ. ‘ಒತ್ತಡ’ ನಿವಾರಣೆ ಪ್ರಸಕ್ತ ದಿನಗಳಲ್ಲಿ ನಮಗೆ ಸವಾಲಾಗಿದ್ದು, ಎಲ್ಲ ಶಾಲಾ ಕಾಲೇಜುಗಳಲ್ಲಿ ಇಂದು ಕೌನ್ಸಿಲರ್‍ಗಳನ್ನು ಕಾಣುತ್ತಿದ್ದೇವೆ. ಮೊಬೈಲ್‍ನಿಂದ ಹಿಡಿದು ವಿವಿಧ ರೀತಿಯ ವ್ಯಸನಗಳಿಗೆ ಯುವಜನಾಂಗ ಇಂದು ಬಲಿಯಾಗುತ್ತಿದ್ದು, ಜಾಗೃತಿ ಕಾರ್ಯಕ್ರಮಗಳಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ನ್ಯಾಯಾಧೀಶರು ಹೇಳಿದರು.

Also Read  ಪುತ್ತೂರು: ಕಾರು ಬೈಕ್ ನಡುವೆ ಭೀಕರ ಅಪಘಾತ ಇಬ್ಬರು ಮೃತ್ಯು

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಎಂ. ರಾಮಕೃಷ್ಣ ರಾವ್ ಪ್ರಾಸ್ತಾವಿಕ ಮಾತನ್ನಾಡಿದರು. ಅತಿಥಿಗಳಾದ ಸಹಾಯಕ ಆಯುಕ್ತ ರವಿಚಂದ್ರ ನಾಯಕ್, ಸಂಪನ್ಮೂಲ ವ್ಯಕ್ತಿ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಮಾನಸಿಕ ರೋಗ ತಜ್ಞ ಡಾ| ಶ್ರೀನಿವಾಸ ಭಟ್ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಪ್ರಾಂಶುಪಾಲರಾದ ಡಾ. ಪಿ.ಎಸ್. ಐತಾಳ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿಗಳಾದ ಮಲ್ಲನಗೌಡ ಪಾಟೀಲ್, ವೆನ್ಲಾಕ್ ಆಸ್ಪತ್ರೆಯ ಡಾ ದಮಯಂತಿ ಕೃಷ್ಣಮೋಹನ್, ಡಾ| ಸುನಿಲ್, ಡಾ| ರತ್ನಾಕರ್ ಪಾಲ್ಗೊಂಡರು. ಡಾ| ಜಯಂತ್ ಸ್ವಾಗತಿಸಿ, ಶ್ರೀನಿವಾಸ ಕಾಲೇಜಿನ ಎಂಎಸ್‍ಡಬ್ಲ್ಯು ವಿಭಾಗದ ಮುಖ್ಯಸ್ಥರಾದ ಡಾ| ಲವೀನ ಡಿಮೆಲ್ಲೋ ವಂದಿಸಿದರು.

Also Read  ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಪ್ರಕರಣ - ಉಡುಪಿಗೆ ಸಿಐಡಿ ತಂಡ ಭೇಟಿ

error: Content is protected !!
Scroll to Top