(ನ್ಯೂಸ್ ಕಡಬ) newskadaba.com ಪುತ್ತೂರು, ಅ.14. ದ್ವಿಚಕ್ರ ವಾಹನ ಮತ್ತು ಸ್ವಿಫ್ಟ್ ಕಾರು ನಡುವೆ ಢಿಕ್ಕಿ ಉಂಟಾದ ಪರಿಣಾಮ ಗ್ರಾಮ ಲೆಕ್ಕಾಧಿಕಾರಿಯೋರ್ವರು ಮೃತಪಟ್ಟ ದಾರುಣ ಘಟನೆ ಭಾನುವಾರ ರಾತ್ರಿ ತಿಂಗಳಾಡಿಯಲ್ಲಿ ನಡೆದಿದೆ.
ಮೃತರನ್ನು ಪುತ್ತೂರು ತಾಲೂಕು ಪುಣಚ ಗ್ರಾಮ ಲೆಕ್ಕಾಧಿಕಾರಿ ಸುದೇಶ್ ಎಂದು ಗುರುತಿಸಲಾಗಿದೆ. ಇವರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದು ಪರಾರಿಯಾಗಿದೆ.ಘಟನೆಯಲ್ಲಿ ಗಂಭೀರ ಗಾಯಗೊಂಡ ಸುದೇಶ್ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪುತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಕಾರು ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.