(ನ್ಯೂಸ್ ಕಡಬ) newskadaba.com ಕಡಬ, ಅ.16. ಬೈಕೊಂಡು ಸ್ಕಿಡ್ ಆಗಿ ಬಿದ್ದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಮೀನಾಡಿ ಎಂಬಲ್ಲಿ ಮಂಗಳವಾರದಂದು ನಡೆದಿದೆ.
ಗಾಯಾಳುಗಳನ್ನು ಕೊಂಬಾರು ಕೆಂಜಾಳ ನಿವಾಸಿ ಲೋಕೇಶ್ ಹಾಗೂ ಸಕಲೇಶಪುರದ ಮಾರನಹಳ್ಳಿ ಹೆಗ್ಗದ್ದೆ ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಮರ್ಧಾಳದಿಂದ ಇಚಿಲಂಪಾಡಿ ಕಡೆಗೆ ತೆರಳುತ್ತಿದ್ದಾಗ ಮೀನಾಡಿ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ದಿನೇಶ್ ಗಂಭೀರ ಗಾಯಗೊಂಡಿದ್ದು, ಲೋಕೇಶ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕಡಬದ 108 ಆಂಬ್ಯುಲೆನ್ಸ್ ಮೂಲಕ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.