ಸಾಂಸ್ಕೃತಿಕ ಲೋಕದ ದಿಗ್ಗಜ, ಡಿಂಡಿಮ ಚಿದಾನಂದ ಕಾಮತ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.24. ಸಾಂಸ್ಕೃತಿಕ ಲೋಕದ ದಿಗ್ಗಜ, ಮೇರುನಟ, ಮಕ್ಕಳ ಪ್ರತಿಭೆಗಳಿಗೆ ಸ್ಪೂರ್ತಿಯಾಗಿದ್ದುಕೊಂಡಿದ್ದ ರಂಗಭೂಮಿಯಲ್ಲಿ ಮತ್ತು ಚಿತ್ರದಲ್ಲೂ ನಟನಾಗಿದ್ದ ಬೊಳುವಾರು ಸಾಂಸ್ಕೃತಿಕ ಕಲಾ ವೇದಿಕೆಯ ಅಧ್ಯಕ್ಷ ಚಿದಾನಂದ ಕಾಮತ್ ಕಾಸರಗೋಡುರವರು ಸೋಮವಾರ ಬೆಳಗಿನ ಜಾವ ನಿಧನರಾದರು.

ರಾತ್ರಿ ತೀವ್ರ ಎದೆ ನೋವಿನಿಂದ ಬಳಲುತ್ತಿದ್ದ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Scroll to Top