ಕೇಂದ್ರ ತನಿಖಾ ದಳದ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿ ಕಡಬದ ಆರೋಪಿ ► ಸುಳಿವು ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ ಎನ್‍ಐಎ

(ನ್ಯೂಸ್ ಕಡಬ) newskadaba.com ಕಡಬ, ಅ.21. ಕಡಬ, ಅ.21. ಗೋವಿಂದ್ ಪನ್ಸಾರೆ ಹತ್ಯೆ, ಮಾಲೆಂಗಾವ್ ಸ್ಪೋಟ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಮೋಸ್ಟ್ ವಾಂಟೆಡ್ ಆರೋಪಿಗಳ ಪಟ್ಟಿಯಲ್ಲಿ ಕಡಬದ ವ್ಯಕ್ತಿ ಸೇರಿದಂತೆ ಹಲವರ ಹೆಸರನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯು ಶನಿವಾರದಂದು (ಎನ್‍ಐಎ) ಪ್ರಕಟಿಸಿದೆ.

ದೇಶಾದ್ಯಾಂತ ಭಯೋತ್ಪಾದಕ ಕೃತ್ಯಗಳಲ್ಲಿ ತೊಡಗಿಸಿಕೊಂಡು ತಲೆಮರಿಸಿಕೊಂಡಿರುವ ಆರೋಪಿಗಳಲ್ಲೊಬ್ಬನಾದ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಟ್ಟತ್ತಡ್ಕ ನಿವಾಸಿ ಸೋಮರಾಜನ್ ಎಂಬವರ ಪುತ್ರ ಜಯಪ್ರಕಾಶ್ ಅಲಿಯಾಸ್ ಅಣ್ಣಾ (47) ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‍ಐಎ) ಮೋಸ್ಟ್ ವಾಂಟೆಡ್ ಆರೋಪಿಗಳಲ್ಲೋರ್ವ. ಆರೋಪಿಯು ಗೋವಾ ರಾಜ್ಯದ ಮಡಂಗಾವ್ ಎಂಬಲ್ಲಿ 2009ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದಲ್ಲಿ ಭಾಗಿಯಾಗಿ ಆ ಬಳಿಕ ತಲೆಮರೆಸಿಕೊಂಡಿದ್ದಾನೆ. ವೃತ್ತಿಯಲ್ಲಿ ಇಲೆಕ್ಟ್ರೀಷಿಯನ್ ಆಗಿದ್ದ ಜಯಪ್ರಕಾಶ್ ಬಳಿಕ ಮೂಲ್ಕಿಯಲ್ಲಿ “ಸನಾತನ ಹಿಂದೂ ಧರ್ಮ” ಪ್ರಚಾರದ ಸಂಸ್ಥೆಯ ವಾಹನದಲ್ಲಿ ಚಾಲಕನಾಗಿದ್ದ ಎನ್ನಲಾಗಿದೆ. ಬೆಳ್ತಂಗಡಿ ತಾಲೂಕು ಕಕ್ಕಿಂಜೆ ತೋಟತ್ತಾಡಿ ದಿ. ನಾರಾಯನ್‍ರವರ ಪುತ್ರಿ ಶೈಲಜಾ ಎಂಬವರನ್ನು ಮದುವೆಯಾಗಿದ್ದ ಈತನಿಗೆ ಒಂದು ಮಗು ಕೂಡ ಇದೆಯೆನ್ನಲಾಗಿದೆ. ಆ ನಂತರ ಊರು ಬಿಟ್ಟಿದ್ದ ಈತ ಮನೆಯವರ ಸಂಪರ್ಕಕ್ಕೂ ಸಿಗದಿದ್ದು, ಈತನ ಬಗ್ಗೆ ಯಾರಿಗೂ ಮಾಹಿತಿ ಇಲ್ಲವಾಗಿದೆ.

Also Read  ಮಣಿಪುರದ ನೋನಿ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ➤ 15 ವಿದ್ಯಾರ್ಥಿಗಳು ಮೃತ್ಯು..!

ಈ ಬಗ್ಗೆ 2013 ಸೆಪ್ಟೆಂಬರ್ 18 ರಂದು ಹೈದರಾಬಾದ್‍ನಿಂದ ಕಡಬಕ್ಕೆ ಆಗಮಿಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‍ಐಎ) ಅಧಿಕಾರಿಗಳು ಜಯಪ್ರಕಾಶ್ ಭಾವ ಚಿತ್ರದ ಪೋಸ್ಟರ್‍ಗಳನ್ನು ಕಂದಾಯ ಇಲಾಖೆಯ ಗೋಡೆಗೆ ಹಚ್ಚಿ ಮಹಜರು ನಡೆಸಿದ್ದರು. ಅಲ್ಲದೆ ಆರೋಪಿಯ ಸುಳಿವು ನೀಡಿದಲ್ಲಿ 25 ಸಾವಿರ ಬಹುಮಾನ ನೀಡುವುದಾಗಿಯೂ ಘೋಷಿಸಿದ್ದರು. ಇದೀಗ 2018 ಅಕ್ಟೋಬರ್ 20 ಶನಿವಾರದಂದು ರಾಷ್ಟ್ರೀಯ ತನಿಖಾ ಸಂಸ್ಥೆಯು ಜಯಪ್ರಕಾಶ್, ಲಷ್ಕರೆ ಉಗ್ರ ಸಂಘಟನೆಯ ಮುಖ್ಯಸ್ಥ ರೆಹಮಾನ್ ಲಖ್ವಿ, ಹಫೀಜ್ ಸಯೈದ್ ಸೇರಿದಂತೆ ಮತ್ತಿತರರ ಹೆಸರನ್ನು ಮೋಸ್ಟ್ ವಾಂಟೆಡ್ ಲಿಸ್ಟ್ ಗೆ ಸೇರ್ಪಡೆಗೊಳಿಸಿ ಎನ್.ಐ.ಎ ವೆಬ್ ಸೈಟ್ ಹಾಗೂ ಟ್ವೀಟರ್ ಅಕೌಂಟ್ ನಲ್ಲಿ ಫೊಟೋ ಸಮೇತ ಪೋಸ್ಟ್ ಮಾಡಿದ್ದು, ಈ ಬಗ್ಗೆ ಮಾಹಿತಿ ದೊರೆತಲ್ಲಿ ಸುಳಿವು ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

Also Read   ಸೇನೆಯ ಮೂವರು ಯೋಧರಿಂದ ಮಹಿಳೆಯರ ಮೇಲೆ ಅತ್ಯಾಚಾರ..!!     ➤ ಇಬ್ಬರು ಆರೋಪಿಗಳ ಬಂಧನ

error: Content is protected !!
Scroll to Top