ದೀಪಾವಳಿಗೆ ರಾತ್ರಿ 8 ರಿಂದ 10 ರ ವರೆಗೆ ಪಟಾಕಿ ಹಚ್ಚಲು ಅವಕಾಶ ► ಪಟಾಕಿ ತಯಾರಿಕೆ ಹಾಗೂ ಮಾರಾಟದ ಬಗ್ಗೆ ಸುಪ್ರೀಂ ನಿಂದ ಮಹತ್ವದ ತೀರ್ಪು

(ನ್ಯೂಸ್ ಕಡಬ) newskadaba.com ನವದೆಹಲಿ, ಅ.23. ದೇಶದಲ್ಲಿ ಪಟಾಕಿ ತಯಾರಿಕೆ ಹಾಗೂ ಮಾರಾಟದ ವಿಚಾರಕ್ಕೆ ಸಂಬಂಧಿಸಿದಂತೆ ಆಗಸ್ಟ್ 28ರಂದು ವಿಚಾರಣೆ ಪೂರ್ಣಗೊಳಿಸಿದ್ದ ಸುಪ್ರೀಂ ಕೋರ್ಟ್ ಮಂಗಳವಾರದಂದು ಮಹತ್ವದ ತೀರ್ಪು ನೀಡಿದೆ.

ಪಟಾಕಿ ತಯಾರಿಕೆ ಹಾಗೂ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದ್ದು, ಅಧಿಕೃತ ಪರವಾನಗಿ ಪಡೆದವರು ಮಾತ್ರ ಪಟಾಕಿಯನ್ನು ಮಾರಾಟ ಮಾಡಬಹುದು. ಪಟಾಕಿಯಲ್ಲಿ ಹಾನಿಕಾರಕ ರಾಸಾಯನಿಕಗಳು ಇರಬಾರದು. ಕಡಿಮೆ ಮಾಲಿನ್ಯವನ್ನು ಉಂಟುಮಾಡುವ ಪಟಾಕಿಯನ್ನು ಮಾತ್ರ ಹಚ್ಚಬಹುದಾಗಿದ್ದು, ದೀಪಾವಳಿ ಸಂದರ್ಭದಲ್ಲಿ ಎಂಟು ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬಹುದು. ಕ್ರಿಸ್‌ಮಸ್ ಹಾಗೂ ಹೊಸವರ್ಷದ ಸಂದರ್ಭದಲ್ಲಿ ರಾತ್ರಿ 11.55 ರಿಂದ 12.30 ರ ವರೆಗೆ ಮಾತ್ರ ಪಟಾಕಿ ಹಚ್ಚಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Also Read  ದಿನೇ ದಿನೇ ಗಗನಕ್ಕೇರುತ್ತಿರುವ ಚಿನ್ನದ ಬೆಲೆ ➤ ಇಂದಿನ ಬೆಲೆ ಎಷ್ಟು ಗೊತ್ತೇ..?

error: Content is protected !!
Scroll to Top