ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸೆಪ್ಟೆಂಬರ್ 21 ರಿಂದ ಮೈಸೂರು ದಸರಾ – News Kadaba

ಸೆಪ್ಟೆಂಬರ್ 21 ರಿಂದ ಮೈಸೂರು ದಸರಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.24. 2017ನೇ ಸಾಲಿನ ಮೈಸೂರು ದಸರಾವನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಸಾಂಪ್ರದಾಯಿಕ ಹಾಗೂ ಆಕರ್ಷಣೀಯವಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ಸೋಮವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಮೈಸೂರು ದಸರಾ ಆಚರಣೆ 2017 ಉನ್ನತ ಮಟ್ಟದ ಸಮಿತಿ ಸಭೆಯ ಬಳಿಕ  ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಸೆಪ್ಟೆಂಬರ್ 21ರಂದು ಬೆಳಗ್ಗೆ ದಸರಾ ಉದ್ಘಾಟನೆಯಾಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಿಗೂ ಅಂದೇ ಚಾಲನೆ ನೀಡಲಾಗುವುದು. ನವರಾತ್ರಿಯು ಸೆ.29ರಂದು ಅಂತ್ಯ ಗೊಳ್ಳುತ್ತದೆ ಎಂದರು. ವಿಜಯ ದಶಮಿ ಅಂಗವಾಗಿ ಸೆ.30ರಂದು ಮಧ್ಯಾಹ್ನ 1.15 ಕ್ಕೆ ನಂದಿ ಪೂಜೆ, 3.15ಕ್ಕೆ ಜಂಬೂ ಸವಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಗುವುದು ಎಂದು ಅವರು ಹೇಳಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪರನ್ನು ದಸರಾ ಕಾರ್ಯಕಾರಿ ಸಮಿತಿ ಅಧ್ಯಕ್ಷರನ್ನಾಗಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇವರೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ, ಜಿಲ್ಲಾಧಿಕಾರಿ ಸೇರಿದಂತೆ ಇನ್ನಿತರ ಅಧಿಕಾರಿಗಳನ್ನು ಸದಸ್ಯರನ್ನಾಗಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ದಸರಾ ಉತ್ಸವದ ಪ್ರಚಾರದ ಉಸ್ತುವಾರಿಯನ್ನು ಪ್ರಿಯಾಂಕ್ ಖರ್ಗೆಗೆ ವಹಿಸಲಾಗಿದೆ ಎಂದಿದ್ದಾರೆ.

Scroll to Top