ತೀವ್ರ ಅನಾರೋಗ್ಯದ ಹಿನ್ನೆಲೆ ► ಜೈಲಿನಲ್ಲಿದ್ದ ಚೈತ್ರಾ ಕುಂದಾಪುರ ಆಸ್ಪತ್ರೆಗೆ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಅ.26. ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯದಲ್ಲಿ ಎರಡು ದಿನಗಳ ಹಿಂದೆ ಜಗಳ ಮಾಡಿ ಜೈಲಿನಲ್ಲಿದ್ದ ಚೈತ್ರಾ ಕುಂದಾಪುರ ಅವರನ್ನು ತೀವ್ರ ಜ್ವರದ ಹಿನ್ನೆಲೆಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಳ್ಯ ತಾಲೂಕು ಹಿಂದೂ ಜಾಗರಣ ವೇದಿಕೆಯ ಕಾರ್ಯದರ್ಶಿ ಗುರುಪ್ರಸಾದ್ ಪಂಜರವರ ಮೇಲೆ ಸರ್ಪ ಸಂಸ್ಕಾರದ ವಿಚಾರದಲ್ಲಿ ಚೈತ್ರಾ ಕುಂದಾಪುರ ಹಾಗೂ ಸಹಚರರು ಹಲ್ಲೆ ನಡೆಸಿದ್ದರು. ಗುರುಪ್ರಸಾದ್ ಪಂಜ ನೀಡಿದ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಚೈತ್ರ ಕುಂದಾಪುರ ಸೇರಿದಂತೆ ಏಳು ಮಂದಿಯನ್ನು ಬಂಧಿಸಿ ಗುರುವಾರದಂದು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಮಂಗಳೂರಿನ ಸಬ್ ಜೈಲಿನಲ್ಲಿರಿಸಲಾಗಿತ್ತು.ಶುಕ್ರವಾರದಂದು ಚೈತ್ರಾ ಕುಂದಾಪುರ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top