ಮಿತ್ತಕೋಡಿ: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ► ಮದುವೆಗೆಂದು ಶಾಪಿಂಗ್ ಮುಗಿಸಿ ಪತಿಯೊಂದಿಗೆ ಬರುತ್ತಿದ್ದ ಪತ್ನಿ ಮೃತ್ಯು, ಪತಿ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.26. ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟು, ಆಕೆಯ ಪತಿ ಗಂಭೀರ ಗಾಯಗೊಂಡ ಘಟನೆ ಮುಡಿಪು ಸಮೀಪದ ಮಿತ್ತಕೋಡಿ ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.

ಮೃತ ಮಹಿಳೆಯನ್ನು ಬಂಟ್ವಾಳ ತಾಲೂಕಿನ ಪಾನೇಲ ನಿವಾಸಿ ಇಸ್ಮಾಯಿಲ್ ಎಂಬವರ ಪತ್ನಿ ಝುಬೈದಾ(35) ಮೃತರು ಎಂದು ಗುರುತಿಸಲಾಗಿದೆ. ಮೃತರು ಮುಂದಿನ ಭಾನುವಾರದಂದು ತನ್ನ ಮನೆಯಲ್ಲಿ ಮದುವೆ ಕಾರ್ಯ ನಡೆಯಲಿದ್ದ ಕಾರಣ ಬಟ್ಟೆ ಬರೆಗಳನ್ನು ಖರೀದಿಸಿ ತನ್ನ ಪತಿಯ ಜೊತೆ ದ್ವಿಚಕ್ರ ವಾಹನದಲ್ಲಿ ಹಿಂದಿರುಗುತ್ತಿದ್ದಾಗ ಮಿತ್ತಕೋಡಿ ಸಮೀಪ ವಿರುದ್ಧ ದಿಕ್ಕಿನಿಂದ ಆಗಮಿಸಿದ ಕಲ್ಲು ಸಾಗಾಟದ ಲಾರಿ ಢಿಕ್ಕಿ ಹೊಡೆದಿದೆ. ಪರಿಣಾಮ ಝುಬೈದಾ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿರುವ ಇಸ್ಮಾಯಿಲ್ ರವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಕಲ್ಲಡ್ಕ ಪ್ರಭಾಕರ ಭಟ್ ಶಾಲೆಯಲ್ಲಿ ಬಾಬರಿ ಮಸೀದಿ ಧ್ವಂಸ ಮರುಸೃಷ್ಟಿ: ವಿವಾದ

ಘಟನೆಯ ಬಳಿಕ ಸ್ಥಳದಲ್ಲಿ ಜನ ಜಮಾಯಿಸತೊಡಗಿದ್ದು, ಉದ್ರಿಕ್ತ ಗುಂಪು ಘಟನೆಗೆ ಕಾರಣವಾದ ಲಾರಿಗೆ ಕಲ್ಲು ತೂರಾಟ ನಡೆಸಿ ಗಾಜನ್ನು ಹಾನಿಗೈದಿದ್ದಾರೆ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top