ಉಡುಪಿ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ ► ಆಂಬ್ಯುಲೆನ್ಸ್ – ಲಾರಿ ಢಿಕ್ಕಿ: ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಅ.27. ಲಾರಿ ಮತ್ತು ಆಂಬ್ಯುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟು, ಮಹಿಳೆಯೋರ್ವರು ಗಂಭೀರ ಗಾಯಗೊಂಡಿರುವ ಘಟನೆ ಶನಿವಾರ ಬೆಳಗ್ಗಿನ ಜಾವ ಉಡುಪಿ ಜಿಲ್ಲೆಯ ಕೋಟದಲ್ಲಿ ಸಂಭವಿಸಿದೆ.

ಉತ್ತರ ಕನ್ನಡ ಜಿಲ್ಲೆಯಿಂದ ರೋಗಿಯೋರ್ವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಉಡುಪಿ ಜಿಲ್ಲೆಯ ಕೋಟ ಸಮೀಪದ ಮಣೂರು ಎಂಬಲ್ಲಿ ಲಾರಿ ನಡುವೆ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಆಂಬ್ಯಲೆನ್ಸ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರೆಲ್ಲರೂ ಉತ್ತರಕನ್ನಡ ಮೂಲದವರು ಎಂದು ಹೇಳಲಾಗಿದೆ. ಮಹಿಳೆಯೋರ್ವರು ಗಂಭೀರ ಗಾಯಗೊಂಡಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತರ ವಿವರ ಇನ್ನಷ್ಟೇ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top