ಸಂಪ್ಯ ಮಸೀದಿಯ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಸ್ವಿಫ್ಟ್ ಕಾರು ಕಳ್ಳತನ ► ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.19. ಕಳೆದ ನಾಲ್ಕು ದಿನಗಳ ಹಿಂದೆ ಸಂಪ್ಯ ಮಸೀದಿಯ ಬಳಿ ನಿಲ್ಲಿಸಲಾಗಿದ್ದ ಸ್ವಿಫ್ಟ್ ಕಾರು ಕಳ್ಳತನ ಪ್ರಕರಣವನ್ನು ಭೇದಿಸಿರುವ ಪುತ್ತೂರು ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಂಟ್ವಾಳ ಠಾಣೆಯ ರೌಡಿ ಶೀಟರ್ ಕಲ್ಲಡ್ಕ ಸಮೀಪದ ಗೋಳ್ತಮಜಲು ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಜುನೈದ್ ಯಾನೆ ಜುನ್ನಿ ಮತ್ತು ಕೆದಿಲ ಗ್ರಾಮದ ಗಡಿಯಾರ ನಿವಾಸಿ ಹಸನ್ ಇಸ್ಮಾಯಿಲ್ ಎಂಬವರ ಪುತ್ರ ಮಹಮ್ಮದ್ ಉನೈಸ್ ಎಂದು ಗುರುತಿಸಲಾಗಿದೆ. ಆರೋಪಿಗಳು ಅಕ್ಟೋಬರ್ 24 ರಂದು ಸಂಜೆ ಸಂಪ್ಯ ಮಸೀದಿಯ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಸುಳ್ಯ ಶಾಂತಿನಗರ ನಿವಾಸಿ ಅಬ್ದುಲ್ ಅಝೀಝ್ ಎಂಬವರಿಗೆ ಸೇರಿದ ಸ್ವಿಫ್ಟ್ ಕಾರನ್ನು ಕಳವುಗೈದಿದ್ದರು. ಘಟನೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಪ್ರಕರಣದ ಜಾಡು ಹಿಡಿದ ಸಂಪ್ಯ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Also Read  ಪರಿಸರವನ್ನು ಹೊರತುಪಡಿಸಿ ಬೇರೆ ವಿಜ್ಞಾನವಿಲ್ಲ- ಶಶಿಧರ ಪಿ

ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಬಿ.ಆರ್. ರವಿಕಾಂತೇಗೌಡ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಪುತ್ತೂರು ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ತನಿಖಾಧಿಕಾರಿಯವರಾದ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷರಾದ ಗೋಪಾಲ್ ನಾಯ್ಕ್ ರವರ ನೇತೃತ್ವದಲ್ಲಿ ಉಪ ನಿರೀಕ್ಷಕರಾದ ಸಕ್ತಿವೇಲು ಸಿಬ್ಬಂದಿಯವರಾದ ಅದ್ರಾಮ, ವಿನಯ್ ಕುಮಾರ್, ದಿನೇಶ, ಕರುಣಾಕರ, ಹರ್ಷಿತ್, ನಿತಿನ್, ಮಹಾದೇವ ಭಾಗವಹಿಸಿದ್ದರು.

error: Content is protected !!
Scroll to Top