ಕಡಬ ಪೊಲೀಸ್ ಹಾಗೂ ಕಂದಾಯ ಇಲಾಖಾ ಅಧಿಕಾರಿಗಳಿಂದ ದಲಿತ ವಿರೋಧಿ ನೀತಿಯ ಆರೋಪ ► ಕಡಬ ತಾಲೂಕು ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.29. ಕಡಬ ಪೊಲೀಸ್ ಉಪ ನಿರೀಕ್ಷಕರು ಹಾಗೂ ಕಡಬ ತಹಶಿಲ್ದಾರರು ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕಡಬ ತಾಲೂಕು ದಲಿತ ಸಂಘಟನೆಗಳ ಮಹಾ ಒಕ್ಕೂಟದ ವತಿಯಿಂದ ಕಡಬದಲ್ಲಿ ಸೋಮವಾರದಂದು ಪ್ರತಿಭಟನೆ ನಡೆಯಿತು.

ಕಡಬ ಠಾಣಾ ಉಪ ನಿರೀಕ್ಷಕರಾದ ಪ್ರಕಾಶ್ ದೇವಾಡಿಗ ಹಾಗೂ ಕಡಬ ತಹಶೀಲ್ದಾರರಾದ ಜಾನ್ ಪ್ರಕಾಶ್ ರೋಡ್ರಿಗಸ್ ರವರು ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಅವರ ಮೇಲೆ ಶಿಸ್ತು ಕ್ರಮವನ್ನು ಕೈಗೊಂಡು ತಕ್ಷಣವೇ ವರ್ಗಾಯಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಕಡಬ ಪೇಟೆಯಲ್ಲಿ ಸಭೆ ಸೇರಿದ ಪ್ರತಿಭಟನಾಕಾರರು ಆ ಬಳಿಕ ಕಡಬ ಠಾಣೆಯ ಆವರಣದಲ್ಲಿ ಪ್ರತಿಭಟನೆ ನಡೆಸಿ ಪೊಲೀಸ್ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದ ನಂತರ ಕಡಬ ತಹಶಿಲ್ದಾರ್ ಕಛೇರಿಯ ಮುಂಭಾಗದಲ್ಲಿ ಘೋಷಣೆ ಕೂಗಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕಾಗಿ ಪಟ್ಟು ಹಿಡಿದಿದ್ದಾರೆ.

Also Read  marsbahis Casino nedir | Bonuslari Bahis

 

error: Content is protected !!
Scroll to Top