(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.29. ಟ್ಯಾಂಕರೊಂದು ಬೈಕಿಗೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೆಲ್ಕಾರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ಮೃತ ಸವಾರನನ್ನು ಕೆಲಿಂಜ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಹಸನ್ ಸಾಹಿಕ್(28) ಎಂದು ಗುರುತಿಸಲಾಗಿದೆ. ಮೂಡಬಿದಿರೆಯ ಬುರ್ಖಾ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಹಸನ್ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಮೆಲ್ಕಾರ್ ಸಮೀಪದ ಬೋಳಂಗಡಿ ಮಸೀದಿ ಬಳಿ ಹಿಂದಿನಿಂದ ಅತೀ ವೇಗವಾಗಿ ಬಂದ ಟ್ಯಾಂಕರೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ. ತೀವ್ರ ಗಾಯಗೊಂಡ ಹಸನ್ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಅಪಘಾತದ ವಿಚಾರ ತಿಳಿದ ತಕ್ಷಣವೇ ಕಾರ್ಯ ಪ್ರವೃತ್ತರಾದ ಸಂಚಾರಿ ಪೊಲೀಸರು ಅಪಘಾತವೆಸಗಿದ ಟ್ಯಾಂಕರನ್ನು ಮಾಣಿ ಸಮೀಪ ವಶಕ್ಕೆ ತೆಗೆದುಕೊಂಡಿದ್ದು, ಟ್ಯಾಂಕರ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Also Read ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಮತ್ತು ಜೀವನದಲ್ಲಿ ನೆಮ್ಮದಿ ಸಿಗಬೇಕು ಅಂದರೆ ತಪ್ಪದೇ ಈ ನಿಯಮ ಪಾಲಿಸಿ