ಬೆಳ್ತಂಗಡಿ ಪಟ್ಟಣ ಪಂಚಾಯತ್ ಚುನಾವಣೆ ಫಲಿತಾಂಶ ► ಇತಿಹಾಸದಲ್ಲೇ ಪ್ರಥಮ ಬಾರಿ ಭರ್ಜರಿ ಜಯಭೇರಿ ಬಾರಿಸಿದ ಬಿಜೆಪಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.31. ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, 7 ಸ್ಥಾನಗಳಲ್ಲಿ ಜಯಭೇರಿ ಸಾಧಿಸುವ ಮ‌ೂಲಕ ಪ್ರಥಮ ಬಾರಿ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲಿದೆ.

ಕಳೆದ ಅವಧಿಗಳಲ್ಲಿ ಅಧಿಕಾರ ನಡೆಸಿದ್ದ ಕಾಂಗ್ರೆಸ್ ಪಕ್ಷವು ಕೇವಲ 4 ಸ್ಥಾನಗಳಲ್ಲಿ ಜಯ ಸಾಧಿಸುವ ಮೂಲಕ ಅಧಿಕಾರವನ್ನು ಕಳೆದುಕೊಂಡಿದೆ 1ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌ನ ರಾಜಶ್ರೀ ವಿ. ರಮಣ್, 2ನೇ ವಾರ್ಡ್‌ನಲ್ಲಿ ಬಿಜೆಪಿಯ ಅಂಬರೀಶ್, 3 ನೇ ವಾರ್ಡ್‌ನಲ್ಲಿ ಬಿಜೆಪಿಯ ಶರತ್ ಕುಮಾರ್ ವಿಜೇರಾಗಿದ್ದಾರೆ. 4ನೇ ವಾರ್ಡ್‌ನಲ್ಲಿ ಬಿಜೆಪಿಯ ರಜನಿ ಕುಡ್ವ, 5ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌ನ ಜನಾರ್ದನ ಕಂಬಾರ, 6ನೇ ವಾರ್ಡ್‌ನಲ್ಲಿ ಕಾಂಗ್ರೆಸ್ ನ ಮಾಜಿ ಸದಸ್ಯೆ ಮುಸ್ತಾರ್‌ ಜಾನು ಮೆಹಬೂಬ್, 7ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಲೋಕೇಶ್, 8ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌ನ ಮಾಜಿ ಸದಸ್ಯ ಜಗದೀಶ ಡಿ., 9ನೇ ವಾರ್ಡ್‌ನಲ್ಲಿ ಬಿಜೆಪಿಯ ತುಳಸಿ, 10ನೇ ವಾರ್ಡ್ ನಲ್ಲಿ ಬಿಜೆಪಿಯ ಗೌರಿ ಮತ್ತು 11ನೇ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿ ಜಯಾನಂದ ಗೌಡ ಜಯ ಗಳಿಸಿದ್ದಾರೆ.

Also Read  ಪರಿಸರದ ದಿನಾಚರಣೆ ಪ್ರಯುಕ್ತ ಎಸ್ಸೆಸ್ಸೆಫ್ ತೆಕ್ಕಾರು ಯುನಿಟ್ ವತಿಯಿಂದ ಉಚಿತ ಸಸಿ ವಿತರಣೆ

error: Content is protected !!
Scroll to Top