ಕಡಬ: ಎರಡು ಕಡೆಗಳಲ್ಲಿ ಅಕ್ರಮ ಮರಳುಗಾರಿಕೆ ► ಒಂದು ಟಿಪ್ಪರ್, ಮರಳುಗಾರಿಕಾ ದೋಣಿ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.31. ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಎರಡು ಕಡೆಗಳಿಗೆ ದಾಳಿ‌ ನಡೆಸಿರುವ ಉಪ್ಪಿನಂಗಡಿ ವೃತ್ತ ನಿರೀಕ್ಷಕರು ಹಾಗೂ ಕಡಬ ಠಾಣಾ ಉಪ ನಿರೀಕ್ಷಕರು ಒಂದು ಟಿಪ್ಪರ್ ಹಾಗೂ ಒಂದು ಮರಳುಗಾರಿಕಾ ದೋಣಿಯನ್ನು ವಶಪಡಿಸಿಕೊಂಡಿದ್ದಾರೆ.

ಕಡಬ ಠಾಣಾ ವ್ಯಾಪ್ತಿಯ 102 ನೆಕ್ಕಿಲಾಡಿ ಗ್ರಾಮದ ಮಾಯಿಪಾಜೆ ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದಲ್ಲಿಗೆ ದಾಳಿ ನಡೆಸಿ ಮರಳು ತುಂಬಿಸಿಟ್ಟಿದ್ದ ಒಂದು ಟಿಪ್ಪರನ್ನು ವಶಪಡಿಸಿಕೊಂಡಿದ್ದಾರೆ. ಇನ್ನೊಂದೆಡೆ ನೂಜಿಬಾಳ್ತಿಲ ಗ್ರಾಮದ ಎಂಜಿರ ಎಂಬಲ್ಲಿ ದಾಳಿ ನಡೆಸಿರುವ ಪೊಲೀಸರು ಮರಳುಗಾರಿಕಾ ದೋಣಿ ಹಾಗೂ ಒಂದು ಲೋಡ್ ಮರಳನ್ನು ವಶಪಡಿಸಿಕೊಂಡಿದ್ದು, ಮುಂದಿನ ಕ್ರಮಕ್ಕಾಗಿ ಗಣಿ ಇಲಾಖೆಗೆ ಹಸ್ತಾಂತರಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಉಪ್ಪಿನಂಗಡಿ ವೃತ್ತ ನಿರೀಕ್ಷಕ ಗೋಪಾಲ್‌ ನಾಯ್ಕ್, ಕಡಬ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Also Read  ಮುಡಿಪು: ಮೊಬೈಲ್ ಅಂಗಡಿಗೆ ನುಗ್ಗಿದ ಕಳ್ಳರು ► ಲಕ್ಷಾಂತರ ಬೆಲೆಯ ಮೊಬೈಲ್ ಕಳವು

error: Content is protected !!
Scroll to Top