ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿಯರು ಬಲಿಯಾಗುತ್ತಿದ್ದಾರೆಂಬ ಆರೋಪ ► ಎಸ್ಡಿಪಿಐ ವತಿಯಿಂದ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ



(ನ್ಯೂಸ್ ಕಡಬ) newskadaba.com ಪುತ್ತೂರು, ನ.01. ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮುಸ್ಲಿಂ ಬಾಣಂತಿಯರು ಬಲಿಯಾಗುತ್ತಿದ್ದಾರೆ ಎಂದು ಆರೋಪಿಸಿ ಎಸ್ಡಿಪಿಐ ವತಿಯಿಂದ ಗುರುವಾರದಂದು ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.







ಕಳೆದ ಅಕ್ಟೋಬರ್ 21 ರಂದು ಪುತ್ತೂರು ತಾಲೂಕಿನ ತ್ಯಾಗರಾಜ ನಗರದ ಬಾಣಂತಿಯೋರ್ವರು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದು, ಘಟನೆ ನಡೆದ ಹತ್ತು ದಿನಗಳಲ್ಲಿ ಇಂತಹುದೇ ಮತ್ತೊಂದು ದುರ್ಘಟನೆ ಸಂಭವಿಸಿದೆ. ಸಿಟಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ನಿರಂತರವಾಗಿ ಮುಸ್ಲಿಂ ಬಾಣಂತಿಯರು ಬಲಿಯಾಗುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.






 

error: Content is protected !!
Scroll to Top