ರಾಮನಗರ: ಅಭ್ಯರ್ಥಿ ‘ಕೈ’ ಕೊಟ್ಟ ಬೆನ್ನಲ್ಲೇ ಬಿಜೆಪಿಗೆ ಮತ್ತೊಂದು ಶಾಕ್..!! ► ಅದೇನೆಂದು ತಿಳಿಯಬೇಕೇ..?

(ನ್ಯೂಸ್ ಕಡಬ) newskadaba.com ರಾಮನಗರ, ನ.03. ರಾಮನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಲ್​. ಚಂದ್ರಶೇಖರ್​ ಎರಡು ದಿನಗಳ ಹಿಂದೆ ಚುನಾವಣಾ ಕಣದಿಂದ ಹಿಂದೆ ಸರಿದು ಕಾಂಗ್ರೆಸ್​ – ಜೆಡಿಎಸ್ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ ರಾಮನಗರದಲ್ಲಿ ಬಿಜೆಪಿಗೆ ಮತ್ತೊಂದು ಶಾಕ್​ ಎದುರಾಗಿದೆ.

ಕಾಂಗ್ರೆಸ್‌ನಿಂದ ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ಸೇರ್ಪಡೆಗೊಂಡು ರಾಮನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಲ್ಲದೆ ಕೊನೆಯ ಕ್ಷಣದಲ್ಲಿ ಎಲ್. ಚಂದ್ರಶೇಖರ್ ಕಣದಿಂದ ಹಿಂದೆ ಸರಿದಿದ್ದರೂ ಈ ಬಗ್ಗೆ ಬಿಜೆಪಿ ಪ್ರಮುಖರು ಯಾರು ತಲೆ ಕೆಡಿಸಿಕೊಂಡಿಲ್ಲ. ಇದರಿಂದ ಬೇಸರಗೊಂಡಿರುವ ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್, ತನ್ನ ಜಿಲ್ಲಾಧ್ಯಕ್ಷ ಸ್ಥಾನ ಮತ್ತು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಭಾನುವಾರದಂದು ಸುದ್ದಿಗೋಷ್ಠಿ ಕರೆಯಲು ತೀರ್ಮಾನಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

Also Read  ಇಂದು ಪುತ್ತೂರಿನ ನಾಲ್ವರಿಗೆ ಡೆಡ್ಲಿ ಕೊರೋನಾ ದೃಢ!

error: Content is protected !!
Scroll to Top