ನವೆಂಬರ್ 10: ದ.ಕ. ಜಿಲ್ಲಾ ಪಂಚಾಯತಿನಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ► ವಿ.ವಿ.ಕಾಲೇಜು ಪ್ರಾಂಶುಪಾಲರಿಂದ ಟಿಪ್ಪು ಸಂದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ನ.08. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇವುಗಳ ಆಶ್ರಯದಲ್ಲಿ ನವೆಂಬರ್ 10 ರಂದು ನೇತ್ರಾವತಿ ಸಭಾಂಗಣ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ನಡೆಯಲಿದೆ.

ಪೂರ್ವಾಹ್ನ ಗಂಟೆ 10.30ಕ್ಕೆ ಕಾರ್ಯಕ್ರಮವು ನಡೆಯಲಿದ್ದು, ಮಾನ್ಯ ನಗರಾಭಿವೃದ್ಧಿ ಮತ್ತು ವಸತಿ ಸಚಿವರೂ, ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಜಿಲ್ಲೆಯ ಜನಪ್ರತಿನಿಧಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಮಂಗಳೂರಿನ ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಎ.ಉದಯ ಕುಮಾರ ಇವರು ಹಜರತ್ ಟಿಪ್ಪು ಸುಲ್ತಾನ್ ಜಯಂತಿಯ ಸಂದೇಶವನ್ನು ನೀಡಲಿರುವರು. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಜಿಲ್ಲಾಡಳಿತದ ಪರವಾಗಿ ಸಹಾಯಕ ನಿರ್ದೇಶಕ ರಾಜೇಶ್ ಜಿ. ಇವರ ಪ್ರಕಟಣೆ ತಿಳಿಸಿದೆ.

Also Read  ಮಂಗಳೂರು: ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ..!! ➤  ಬಂಧಿತರ ಸಂಖ್ಯೆ 15 ಕ್ಕೆ ಏರಿಕೆ                                       

error: Content is protected !!
Scroll to Top