ವಿದ್ಯುತ್ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com
ಬೆಂಗಳೂರು, ಜು. 25. ಕೆಪಿಸಿಎಲ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಇಂಜಿನಿಯರ್ ಹಾಗೂ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು,
183 ಅಸಿಸ್ಟೆಂಟ್ ಇಂಜಿನಿಯರ್ ಮತ್ತು 165 ಜೂನಿಯರ್ ಇಂಜಿನಿಯರ್ ಸೇರಿದಂತೆ ಒಟ್ಟು 348 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು 2017ನೇ ಆಗಸ್ಟ್ 18 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಸಿಸ್ಟೆಂಟ್ ಇಂಜಿನಿಯರ್ (183 ಹುದ್ದೆಗಳು)
ವಿದ್ಯಾರ್ಹತೆ: ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು. ತಿಂಗಳಿಗೆ 19055 ರಿಂದ 43995 ರೂ. ವೇತನ ನಿಗದಿಗೊಳಿಸಲಾಗಿದೆ. ಆಗಸ್ಟ್ 18, 2017ಕ್ಕೆ ಅನ್ವಯವಾಗುವಂತೆ 18ರಿಂದ 35 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

Also Read  ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ➤ 50 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ಭಡ್ತಿ

ಜೂನಿಯರ್ ಇಂಜಿನಿಯರ್ (165 ಹುದ್ದೆ) ಜೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಡಿಗ್ರಿ ಪೂರ್ಣಗೊಳಿಸಿರಬೇಕು.
ತಿಂಗಳಿಗೆ 14365 ರಿಂದ 40785 ರೂ. ವೇತನ ನಿಗದಿಪಡಿಸಿದ್ದು, ಆಗಸ್ಟ್ 18, 2017ಕ್ಕೆ ಅನ್ವಯವಾಗುವಂತೆ 18 ರಿಂದ 35 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಮೇಲಿನ ಎರಡು ಹುದ್ದೆಗಳಿಗೆ ಲಿಖಿತ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹೆಚ್ಚಿನ ಮಾಹಿತಿಗಳಿಗಾಗಿ ಕರ್ನಾಟಕ ಸರಕಾರದ ವಿದ್ಯುತ್ ನಿಗಮದ ವೆಬ್ಸೈಟ್ ಲಾಗಿನ್ ಆಗಮಹುದು.

error: Content is protected !!
Scroll to Top