ಟಿಪ್ಪು ಜಯಂತಿ ಆಚರಣೆಯ ಹಿನ್ನೆಲೆ ► ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯವರೆಗೆ 144 ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ.10. ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ಸರ್ಕಾರದ ಕಾರ್ಯಕ್ರಮವಾಗಿ ಆಚರಿಸಲಾಗುತ್ತಿದ್ದು, ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ಬಾರದ ರೀತಿಯಲ್ಲಿ ಜಿಲ್ಲೆಯಾದ್ಯಂತ ಅಕ್ಟೋಬರ್ 09 ಸಂಜೆ 6 ಗಂಟೆಯಿಂದ ದಿನಾಂಕ ಅಕ್ಟೋಬರ್ 11 ಮಧ್ಯರಾತ್ರಿ 12 ಗಂಟೆಯವರೆಗೆ ಯಾವುದೇ ಸಾರ್ವಜನಿಕ ರಾಜಕೀಯ ಮುಂತಾದ ಬಹಿರಂಗ ಸಭೆ ಸಮಾರಂಭ, ಜಾಥಾ ಮತ್ತು ಮೆರವಣಿಗೆಗಳನ್ನು ನಿರ್ಬಂಧಿಸಿ ದಂಡ ಪ್ರಕ್ರಿಯೆ ಸಂಹಿತೆ 144 ರನ್ವಯ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಕ್ಷಿಣ ಕನ್ನಡ ಜಿಲ್ಲೆ ಎಸ್ ಸಸಿಕಾಂತ್ ಸೆಂಥಿಲ್ ಇವರು ಆದೇಶಿಸಿರುತ್ತಾರೆ.

Also Read  ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ➤ ಮಾಸಿಕ ಬಾಡಿಗೆ ಆಧಾರದಲ್ಲಿ 1ವರ್ಷದ ಅವಧಿಗೆ ವಾಹನವನ್ನು ಒದಗಿಸುವ ಬಗ್ಗೆ ಟೆಂಡರ್ ಆಹ್ವಾನ

ಪೊಲೀಸ್ ಕಮಿಷನರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವರದಿಯನ್ನು ಆಧರಿಸಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ. ಜಿಲ್ಲೆಯಾದ್ಯಂತ ಯಾವುದೇ ವ್ಯಕ್ತಿ, ಸಂಘಟನೆಯ ಸದಸ್ಯರು ಯಾವುದೇ ರೀತಿಯ ಪ್ರತಿಭಟನೆ ಮೆರವಣಿಗೆ, ಬ್ಯಾನರ್ಸ್, ಬಂಟಿಂಗ್ಸ್, ಬಾವುಟ, ಧ್ವನಿವರ್ಧಕ ಅಳವಡಿಸಿ ಘೋಷಣೆಗಳನ್ನು ಕೂಗದಂತೆ ಹಾಗೂ ಗುಂಪು ಗುಂಪಾಗಿ ಸೇರಿ ಪ್ರತಿಭಟನೆಗಳನ್ನು ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

error: Content is protected !!
Scroll to Top