ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕೇಂದ್ರ ಸಚಿವ ಅನಂತ ಕುಮಾರ್ ನಿಧನದ ಹಿನ್ನೆಲೆ ► ಇಂದು ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ – News Kadaba

ಕೇಂದ್ರ ಸಚಿವ ಅನಂತ ಕುಮಾರ್ ನಿಧನದ ಹಿನ್ನೆಲೆ ► ಇಂದು ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.12. ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಎಚ್.ಎನ್. ಅನಂತಕುಮಾರ್ (59) ಅನಾರೋಗ್ಯದಿಂದ ಸೋಮವಾರ ಬೆಳಗ್ಗಿನ ಜಾವ ನಿಧನರಾದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸರಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ಜೊತೆಗೆ ಸರಕಾರಿ ಕಚೇರಿಗಳಿಗೂ ಒಂದು ದಿನಗಳ ರಜೆಯನ್ನು ಘೋಷಿಸಿದ್ದು ಮೂರು ದಿನಗಳ ಕಾಲ ಶೋಕಾಚರಣೆಯನ್ನು ನಡೆಸಲಿದೆ.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಸೋಮವಾರ ಬೆಳಗ್ಗಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅನಂತಕುಮಾರ್ ನಿಧನದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪ್ರಧಾನಿ ಮೋದಿಯವರು ಬೆಂಗಳೂರಿಗೆ ಆಗಮಿಸಿ ಮೃತರ ಅಂತಿಮ ದರ್ಶನ ಪಡೆಯಲಿದ್ದಾರೆ.

Scroll to Top