ಪೆರ್ನೆ: ಬೈಕ್ – ರಿಕ್ಷಾ ಢಿಕ್ಕಿ ► ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ನ.12. ಬೈಕ್ ಮತ್ತು ಗೂಡ್ಸ್ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆಯಲ್ಲಿ ನಡೆದಿದೆ.

ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಪೆರ್ನೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಗೂಡ್ಸ್ ರಿಕ್ಷಾ ನಡುವೆ ಪೆರ್ನೆ ಸಮೀಪದ ದೋರ್ಮೆ ಎಂಬಲ್ಲಿ ಮುಖಾಮುಖಿ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಬುಡೋಳಿ ಸಮೀಪ್ ಶೇರಾ ನಿವಾಸಿ ಲಕ್ಮಣ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟರು.

Also Read  ಮಂಜೇಶ್ವರ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

error: Content is protected !!
Scroll to Top