ಕಬಕ: ಗೂಡ್ಸ್ ರಿಕ್ಷಾ ಢಿಕ್ಕಿ ► ಪಾದಚಾರಿ ಗಂಭೀರ



(ನ್ಯೂಸ್ ಕಡಬ) newskadaba.com ಪುತ್ತೂರು, ನ.13. ಗೂಡ್ಸ್ ರಿಕ್ಷಾವೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಕಬಕದಲ್ಲಿ ಮಂಗಳವಾರ ರಾತ್ರಿ ನಡೆದಿದೆ.







ಮಂಗಳವಾರ ರಾತ್ರಿ ಕಬಕ ಮಸೀದಿಯ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಗೂಡ್ಸ್ ರಿಕ್ಷಾವು ಢಿಕ್ಕಿ ಹೊಡೆದಿದ್ದು, ಪಾದಚಾರಿಯು ಗಂಭೀರವಾಗಿ ಗಾಯಗೊಂಡಿದ್ದಾರೆ. ಢಿಕ್ಕಿ ಹೊಡೆದ ರಭಸಕ್ಕೆ ರಿಕ್ಷಾ ರಸ್ತೆಗೆ ಮಗುಚಿ ಬಿದ್ದಿದೆ. ಗಂಭೀರ ಗಾಯಗೊಂಡ ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 

error: Content is protected !!
Scroll to Top