ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ..? ಚಿಂತೆ ಬಿಡಿ.. ► ನ.17, 18 ರಂದು ಮತದಾರರ ಮಿಂಚಿನ ನೋಂದಣಿ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ.16. ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ನವೆಂಬರ್ 20 ಕೊನೆಯ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ವಿಕಲಚೇತನರು, ಮಹಿಳೆಯರು, ದುರ್ಬಲರು ಮತ್ತು ಯುವ ಮತದಾರರ ಅನುಕೂಲಕ್ಕಾಗಿ ನವೆಂಬರ್ 17 ಮತ್ತು 18ರಂದು ಮತದಾರರ ಮಿಂಚಿನ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ನೋಂದಣಿ ಅಭಿಯಾನವು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆವರೆಗೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ನಡೆಯಲಿದೆ.

ಅರ್ಹತೆಗಳು: 01-01-2019 ರ ಅರ್ಹತಾ ದಿನಾಂಕದಂತೆ 18 ವರ್ಷ ವಯೋಮಾನದ ಭಾರತೀಯ ಪ್ರಜೆಯಾಗಿರಬೇಕು. ಆಯಾ ವಿಧಾನಸಭಾ ಕ್ಷೇತ್ರದ ಸಾಮಾನ್ಯ ನಿವಾಸಿಯಾಗಿರಬೇಕು.

ಅಗತ್ಯವಿರುವ ದಾಖಲೆಗಳು: ವಯಸ್ಸಿನ ಬಗ್ಗೆ ದಾಖಲೆಗಳು, ಶಾಲಾ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾಸ್ ಪೋರ್ಟ್, ಎಸ್ಸೆಸ್ಸೆಲ್ಸಿ/ಪಿ.ಯು.ಸಿ ಅಂಕಪಟ್ಟಿಗಳು, ಪಾನ್‍ಕಾರ್ಡ್, ಹಾಗೂ ವೈದ್ಯಕೀಯ ಪ್ರಮಾಣ ಪತ್ರ.

ವಾಸಸ್ಥಳದ ಬಗ್ಗೆ ದಾಖಲೆಗಳು: ಪಡಿತರ ಚೀಟಿ, ಆಧಾರ್ ಕಾರ್ಡು, ರಹವಾಸಿ ಪತ್ರ, ಗ್ಯಾಸ್ ಸಿಲಿಂಡರ್ ಸ್ವೀಕೃತಿ ರಶೀದಿ, ವಿದ್ಯುತ್ ಬಿಲ್ ಪಾವತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಬಾಡಿಗೆ ಕರಾರು ಪತ್ರ ಹಾಗೂ ಇನ್ನಿತರ ದಾಖಲೆಗಳು. ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳು.

Also Read  ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ- ಅರ್ಜಿ ಆಹ್ವಾನ

ಯಾವುದಕ್ಕೆ ಯಾವ ಅರ್ಜಿ :-

  • ನಮೂನೆ- 6: 18 ವರ್ಷ ಪೂರೈಸಿದ ಹೊಸ ಮತದಾರರು ಹಾಗೂ ಒಂದು ಕ್ಷೇತ್ರದಿಂದ ಮತ್ತೊಂದೆಡೆ ವಾಸಸ್ಥಳ ಬದಲಾಯಿಸಿದವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಅರ್ಜಿ ಬಳಸಬಹುದು.
  • ನಮೂನೆ-6ಎ: ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ ಮಾಡಲು.
  • ನಮೂನೆ-7:  ಮತದಾರರ ಪಟ್ಟಿಯಿಂದ ತಮ್ಮ ಹೆಸರನ್ನು ತೆಗೆದುಹಾಕಲು
  • ನಮೂನೆ-8: ಹೆಸರು, ತಂದೆಯ ಹೆಸರು, ಮನೆ ವಿಳಾಸ, ವಯಸ್ಸಿನ ಹಾಗೂ ಭಾವಚಿತ್ರಕ್ಕೆ ಸಂಬಂಧಿಸಿದ ದೋಷಗಳಿದ್ದರೆ ಸರಿಪಡಿಸಿಕೊಳ್ಳಲು.
  • ನಮೂನೆ-8ಎ: ಒಂದೇ ವಿಧಾನಸಭಾ ಕ್ಷೇತ್ರದೊಳಗೆ ವಾಸಸ್ಥಳ ಬದಲಾಯಿಸಿದ ಸಂದರ್ಭದಲ್ಲಿ ಸಲ್ಲಿಸಬೇಕಾಗಿರುವ ಅರ್ಜಿ.
Also Read  ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಎಫ್‌ಐಆರ್ ದಾಖಲು

ಸಾರ್ವಜನಿಕರು ಮತದಾರರ ಮಿಂಚಿನ ಅಭಿಯಾನದ ಸದುಪಯೋಗವನ್ನು ಪಡೆಯುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top