ಕಡಬ: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.18. ರೋಡ್ ಅಡಿಕೆ ಕೀಳುತ್ತಿದ್ದ ವ್ಯಕ್ತಿಯೋರ್ವರು ಆಯತಪ್ಪಿ ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ಠಾಣಾ ವ್ಯಾಪ್ತಿಯ ಹಳೆನೇರಂಕಿಯಲ್ಲಿ ಭಾನುವಾರದಂದು ನಡೆದಿದೆ.

ಮೃತರನ್ನು ಹಳೆನೇರಂಕಿ ಗ್ರಾಮದ ಬರೆಂಬೆಟ್ಟು ನಿವಾಸಿ ವೀರಪ್ಪ ಪೂಜಾರಿ(66) ಎಂದು ಗುರುತಿಸಲಾಗಿದೆ. ಮೃತರು ಭಾನುವಾರದಂದು ತನ್ನದೇ ತೋಟದಲ್ಲಿ ಅಡಿಕೆ ಮರಕ್ಕೆ ಹತ್ತಿ ಅಡಿಕೆ ಕೀಳುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಕೆಳಕ್ಕೆ ಬಿದ್ದರೆನ್ನಲಾಗಿದೆ. ಗಂಭೀರ ಗಾಯಗೊಂಡ ಇವರನ್ನು ತಕ್ಷಣವೇ ಪುತ್ತೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಹಾದಿ‌ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕರಾವಳಿಯಲ್ಲಿ ಮಾದಕ ದ್ರವ್ಯದ ನಶೆ ➤ ಟ್ರಾಫೀಕ್ ರೂಲ್ಸ್ ಬ್ರೇಕರ್ ವಿರುದ್ಧ ಪೊಲೀಸ್ ಕಾರ್ಯಾಚರಣೆ

error: Content is protected !!
Scroll to Top