ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ – ಬೈಕ್ ನಡುವೆ ಅಪಘಾತ ► ಬೈಕ್ ಸವಾರ ಛಿದ್ರಗೊಂಡು ಸ್ಥಳದಲ್ಲೇ ಮೃತ್ಯು



(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.23. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪ ಗ್ಯಾಸ್ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.







ಮೃತ ಸವಾರನನ್ನು ಸ್ಥಳೀಯ ನಿವಾಸಿ ಜಗದೀಶ್ ಎಂದು ಗುರುತಿಸಲಾಗಿದೆ. ನೆಲ್ಯಾಡಿಯ ಆರ್ಲ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಉಪ್ಪಿನಂಗಡಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಗ್ಯಾಸ್ ಟ್ಯಾಂಕರ್ ರಸ್ತೆಗಡ್ಡವಾಗಿ ಮಗುಚಿ ಬಿದ್ದುದರಿಂದ ಸಂಚಾರಕ್ಕೆ ಅಡಚಣೆಯಾಗಿದೆ.






error: Content is protected !!
Scroll to Top