ಮರ್ಧಾಳ: ಕಿರು ಸೇತುವೆಗೆ ಢಿಕ್ಕಿ ಹೊಡೆದು ಕೆಳಕ್ಕುರುಳಿದ ಕಾರು ► ಮಗು ಸೇರಿದಂತೆ ಪ್ರಯಾಣಿಕರು ಪವಾಡ ಸದೃಶ ಪಾರು

(ನ್ಯೂಸ್ ಕಡಬ) newskadaba.com ಕಡಬ, ನ.24. ಸ್ವಿಫ್ಟ್ ಡಿಸೈರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ‌ ಹೆದ್ದಾರಿಯ ಪಕ್ಕದ ಕಿರು ಸೇತುವೆಗೆ ಉರುಳಿ ಬಿದ್ದ ಘಟನೆ ಮರ್ಧಾಳ ಸಮೀಪದ ಅಳೇರಿ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಬೆಂಗಳೂರು ಮೂಲದ ಕುಟುಂಬವು ಧರ್ಮಸ್ಥಳ ದೇವರ ದರ್ಶನ ಮುಗಿಸಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದಾಗ ಅಳೇರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಕಿರು ಸೇತುವೆಯ ತಡೆ ಗೋಡೆಗೆ ಢಿಕ್ಕಿ ಹೊಡೆದು ಕೆಳಕ್ಕುರುಳಿದೆ. ಘಟನೆಯಲ್ಲಿ ಸಣ್ಣ ಮಗು ಸೇರಿದಂತೆ ಐವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ರಾಜ್ಯ ಹೆದ್ದಾರಿಯ ಪಕ್ಕದಲ್ಲೇ ಸಣ್ಣ ತಡೆಗೋಡೆ ಕಟ್ಟಿರುವಂತಹ ಕಿರು ಸೇತುವೆಯ ಬಗ್ಗೆ ಯಾವುದೇ ಮುನ್ನೆಚ್ಚರಿಕೆ ಫಲಕ ಹಾಕದೆ ಇರುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕಿಂತಲೂ ಮೊದಲು ಇಂತಹ ಹಲವು ಘಟನೆಗಳು ಇಲ್ಲಿ ನಡೆದಿದ್ದು ಯಾರೋ ಬಡಪಾಯಿಗಳ ಜೀವಹಾನಿಯಾಗದೆ ಅಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ತೋರುತ್ತಿಲ್ಲ.

Also Read  ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚನೆ ➤ ಅರ್ಜಿ ಆಹ್ವಾನ

error: Content is protected !!
Scroll to Top