ಕಡಬ: ನೀರಿನಲ್ಲಿ ಮುಳುಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು.25. ಠಾಣಾ ವ್ಯಾಪ್ತಿಯ ಕೊಲ್ಯದ ಕಟ್ಟೆ ಎಂಬಲ್ಲಿ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ.

ಮೃತ ಯುವಕನನ್ನು ಗೋಳಿಯಡ್ಕ ನಿವಾಸಿ ಅಮ್ಮು ಮುಗೇರ ಎಂಬವರ ಪುತ್ರ ವಸಂತ (26) ಎಂದು ಗುರುತಿಸಲಾಗಿದೆ. ಬುಧವಾರದಂದು ಬೆಳಿಗ್ಗೆ ಸ್ಥಳೀಯ ವ್ಯಕ್ತಿಯೊಂದಿಗೆ ಮೀನು ಹಿಡಿಯಲೆಂದು ತೆರಳಿದ್ದ ವಸಂತ ಕೊಲ್ಯದಕಟ್ಟೆ ಪವರ್ ಡ್ಯಾಂ ಬಳಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇಂದು ಬೆಳಿಗ್ಗೆ ಎದೆನೋವು ಇದೆಯೆಂದು ಮನೆಯವರಲ್ಲಿ ತಿಲಿಸಿದ್ದಾರೆನ್ನಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಕಾರಣ ತಿಳಿದು ಬರಲಿದೆ‌.

Scroll to Top