ಕಡಬ ಠಾಣಾ ಸಿಬ್ಬಂದಿ ಅಂಜನಪ್ಪ ಹುಟ್ಟೂರಿಗೆ ವರ್ಗಾವಣೆ ► ಠಾಣೆಯಲ್ಲಿ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ನ.26. ಕಡಬ ಠಾಣೆಯಲ್ಲಿ ಕಳೆದ ಆರು ವರ್ಷಗಳಿಂದ ಕರ್ತವ್ಯ ನಿರ್ವಹಿಸಿ ಇದೀಗ ದಾವಣಗೆರೆ ಜಿಲ್ಲೆಗೆ ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಯನ್ನು ಬೀಳ್ಕೊಡಲಾಯಿತು.

ಮೂಲತಃ ದಾವಣಗೆರೆಯವರಾದ ಪೊಲೀಸ್ ಸಿಬ್ಬಂದಿ ಅಂಜನಪ್ಪ ಹಾಗೂ ಅವರ ಪತ್ನಿಯನ್ನು ಕಡಬ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ ಶಾಲು ಹೊದಿಸಿ, ಫಲ ಪುಷ್ಪ ನೀಡುವ ಮೂಲಕ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಕಡಬ ಠಾಣಾ ಸಿಬ್ಬಂದಿಗಳು ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.

error: Content is protected !!

Join WhatsApp Group

WhatsApp Share