ವಿಟ್ಲ ದೇವಸ್ಥಾನದ ಮಾಜಿ ಅರ್ಚಕ ಬಾವಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ.04. ಇಲ್ಲಿನ ದೇವಸ್ಥಾನದ ಮಾಜಿ ಅರ್ಚಕರೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ವಿಟ್ಲದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಇತಿಹಾಸ ಪ್ರಸಿದ್ಧ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸುಮಾರು 35 ವರ್ಷಗಳ ಕಾಲ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ವಾಸುದೇವ ಕೆದಿಲಾಯ(79) ಎಂದು ಗುರುತಿಸಲಾಗಿದೆ. ಇವರು ಇಂದು ಬೆಳಗ್ಗಿನ ಜಾವ ದೇವಸ್ಥಾನದ ಪಕ್ಕದಲ್ಲಿನ ತನ್ನ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಘಟನೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Also Read  SSLC ಪರೀಕ್ಷೆ ಮುಕ್ತಾಯ ➤ ಶಿಕ್ಷಕರಿಗೆ ಧನ್ಯವಾದ ತಿಳಿಸಿದ ಶಿಕ್ಷಣ ಸಚಿವರು

error: Content is protected !!
Scroll to Top