ಉಪ್ಪಿನಂಗಡಿ: ಕುಸಿದು ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.26.  ವ್ಯಕ್ತಿಯೋರ್ವರು ನಡೆದುಕೊಂಡು ಹೋಗುತ್ತಿದ್ದಾಗ  ಕುಸಿದು ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿ ಪೇಟೆಯಲ್ಲಿ  ಬುಧವಾರ ರಾತ್ರಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕೇರಳ ಮೂಲದಿಂದ ಬಿದಿರು ಕಡಿಯುವ ಕೆಲಸಕ್ಕೆಂದು ಆಗಮಿಸಿದ್ದ ರಾಮೇಂದ್ರ ಎಂದು ಗುರುತಿಸಲಾಗಿದೆ. ಇವರು ತನ್ನ ಸಹ ಕಾರ್ಮಿಕನೊಂದಿಗೆ ಉಪ್ಪಿನಂಗಡಿ ಪೇಟೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕುಸಿದು ಬಿದ್ದು ಅಸುನೀಗಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

Scroll to Top