ಕಡಬದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಡಿ.06. ಕಡಬದ ಯುವಕನೋರ್ವ ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಜೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಿಳಿನೆಲೆ ಗ್ರಾಮದ ಬೈಲು ಆನಂದ ಗೌಡ ಎಂಬವರ ಪುತ್ರ ರಾಜೇಶ್(24) ಎಂದು ಗುರುತಿಸಲಾಗಿದೆ. ಕಳೆದ ಕೆಲವು ಸಮಯಗಳಿಂದ ಊರಿನಲ್ಲಿದ್ದ ಈತ ತನ್ನ ಅಕ್ಕನ ಜೊತೆಗೆ ಬೆಂಗಳೂರಿಗೆ ತೆರಳಿದ್ದು, ಗುರುವಾರ ಸಂಜೆ ಡೆತ್ ನೋಟ್ ಬರೆದಿಟ್ಟು ಇಲಿ ಪಾಷಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Scroll to Top