ಮಂಗಳೂರು: ಬಾಡಿ ಮಸಾಜ್ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ► ಆಯುರ್ವೇದಿಕ್ ಥೆರಪಿ ಸೆಂಟರ್ ಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08. ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮೂವರು ನೊಂದ ಮಹಿಳೆಯರನ್ನು ರಕ್ಷಿಸಿದ್ದಾರೆ.

ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಕ್ಲಾಸಿಕ್ ಆರ್ಕೆಡ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ದೀಪಂ ಆರ್ಯುವೇದಿಕ್ ಥೆರಫಿ ಸೆಂಟರ್ ಮಸಾಜ್ ಪಾರ್ಲರ್ ನಲ್ಲಿ ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎನ್ನುವ ದೂರು ಬಂದಿದ್ದು, ಇ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಮಸಾಜ್ ಪಾರ್ಲರ್ ನ್ನು ನಡೆಸುತ್ತಿದ್ದ ಆರೋಪಿ ರೋಶನ್ ಪರಾರಿಯಾಗಿದ್ದು, ವೇಶ್ಯಾವಾಟಿಕೆ ವೃತ್ತಿಯನ್ನು ನಡೆಸುತ್ತಿದ್ದ ಮೂರು ಮಂದಿ ಯುವತಿಯರನ್ನು ರಕ್ಷಣೆ ಮಾಡಲಾಗಿದೆ. ಬಾಡಿ ಮಸಾಜ್ ಎಂಬ ಹೆಸರಿನಲ್ಲಿ ಯುವತಿಯರನ್ನು ಗಿರಾಕಿಗಳಿಗೆ ಒದಗಿಸಿ ವೇಶ್ಯಾವಾಟಿಕೆಗೆ ಪ್ರೇರೆಪಿಸುತ್ತಿದ್ದರು ಎನ್ನಲಾಗಿದೆ.

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್‌ಪೆಕ್ಟರ್ ಶಾಂತಾರಾಮ್, ಉತ್ತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುರೇಶ್ ಕುಮಾರ್ ಹಾಗೂ ಸಿಸಿಬಿ ಘಟಕದ ಪಿಎಸ್ಐ ಶ್ಯಾಮ್ ಸುಂದರ್, ಕಬ್ಬಾಳ್ ರಾಜ್ ಹಾಗೂ ಸಿಸಿಬಿ ಘಟಕದ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

error: Content is protected !!

Join the Group

Join WhatsApp Group