(ನ್ಯೂಸ್ ಕಡಬ) newskadaba.com ಕಡಬ, ಡಿ.08. ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕೋತ್ಸವ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಶನಿವಾರ ಸಂಜೆ ವಿದ್ಯಾಸಂಸ್ಥೆಯ ದಿ| ಫಾ| ಜೋಸ್ ವಾಳಕುಝಿ ಸ್ಮಾರಕ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಾಂಶುಪಾಲ ಜಾರ್ಜ್ ಟಿ.ಎಸ್. ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ಎಸ್.ಭಟ್‍ರವರು ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ವಿಧಾನಪರಿಷತ್ ಸದಸ್ಯ ಐವನ್ ಡಿ.ಸೋಜ ಉದ್ಘಾಟಿಸಲಿದ್ದು, ಪುತ್ತೂರು ಧರ್ಮಪ್ರಾಂತ್ಯದ ವಿಕಾರ್ ಜನರಲ್ ರೆ| ಫಾ| ಡಾ| ಎಲ್ದೋ ಪುತ್ತನ್‍ಕಂಡತ್ತಿಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಡಬ ರಹ್ಮಾನಿಯಾ ಟೌನ್ ಜುಮ್ಮಾ ಮಸ್ಜಿದ್ ಅಧ್ಯಕ್ಷ ಎಸ್.ಅಬ್ದುಲ್ ಖಾದರ್‍ರವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್, ತಾ.ಪಂ.ಸದಸ್ಯ ಗಣೇಶ್ ಕೈಕುರೆ, ನೂಜಿಬಾಳ್ತಿಲ ಗ್ರಾ.ಪಂ.ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕ, ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಮಾಮಚ್ಚನ್ ಎಂ., ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಖಾದರ್ ಸಾಹೇಬ್ ಕಲ್ಲುಗುಡ್ಡೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ| ಅನಿಲ್ ಈಶೋ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೇಶವ ಗೌಡ ಎಂ. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳು, ಹಳೆವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.
ಸಂಸ್ಥೆಯಲ್ಲಿ 36 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಉಪನ್ಯಾಸಕ ಜೋಸೆಫ್ ಟಿ.ಜೆ., ಹಾಗೂ ಗಣಿತ ಅಧ್ಯಾಪಕ ಬಾಲಕೃಷ್ಣ ರೈಯವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಬೆಥನಿ ವಿದ್ಯಾಸಂಸ್ಥೆಗಳ ಸಂಚಾಲಕ ರೆ| ಫಾ| ಡಾ| ವರ್ಗೀಸ್ ಕೈಪನಡ್ಕರವರು ಸನ್ಮಾನಿಸಲಿದ್ದಾರೆ. ಅಲ್ಲದೇ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಇಂಟರ್‍ಲಾಕ್ ರಸ್ತೆ ಉದ್ಘಾಟನೆ: ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಿಂದ ವಿದ್ಯಾಸಂಸ್ಥೆ ಸಂಪರ್ಕಿಸುವ ರಸ್ತೆಗೆ ಜಿ.ಪಂ. ಹಾಗೂ ತಾ.ಪಂ.ಅನುದಾನದಿಂದ ಇಂಟರ್‍ಲಾಕ್ ಅಳವಡಿಸಲಾಗಿದ್ದು ಇದರ ಉದ್ಘಾಟನೆಯನ್ನು ಸಭಾ ಕಾರ್ಯಕ್ರಮ ಆರಂಭಕ್ಕೆ ಮೊದಲು ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್‍ರವರು ಉದ್ಘಾಟಿಸಲಿದ್ದಾರೆ.