ಮಂಗಳೂರು: ಯುವತಿಯರನ್ನಿಟ್ಟು ಅನೈತಿಕ ಚಟುವಟಿಕೆ ► ಆರೋಪಿಯ ಬಂಧನ, ಮೂವರು ಯುವತಿಯರ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09. ನಗರದ ಹೊರವಲಯದ ಸುರತ್ಕಲ್ ಠಾಣಾ ವ್ಯಾಪ್ತಿಯ ಕಟ್ಟಡವೊಂದರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಅರಿತ ಸುರತ್ಕಲ್ ಪೊಲೀಸರ ತಂಡ ದಾಳಿ ನಡೆಸಿ ಓರ್ವನನ್ನು ವಾಹನ ಸಮೇತ ಬಂಧಿಸಿದ್ದು, ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.

ಬಂಧಿತ ಆರೋಪಿಯನ್ನು ಪುನೀತ್ ಕುಮಾರ್ ಬಂಧಿತ ಎಂದು ಗುರುತಿಸಲಾಗಿದೆ. ಸುರತ್ಕಲ್ ಠಾಣಾ ವ್ಯಾಪ್ತಿಯ ಇಡ್ಯಾ ಗ್ರಾಮದ ಕಟ್ಟಡವೊಂದರಲ್ಲಿ ಅನೈತಿಕ ಚಟುವಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 51,450 ರೂ. ನಗದು, ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ದಕ್ಷಿಣ ಕನ್ನಡ ಜಿಲ್ಲೆಯ 2 ಹೆದ್ದಾರಿ ಕಾಮಗಾರಿಗೆ ಸಚಿವ ಗಡ್ಕರಿಯಿಂದ ಶಿಲಾನ್ಯಾಸ

error: Content is protected !!
Scroll to Top