ಬಂಟ್ವಾಳ: ಇಂದಿರಾ ಕ್ಯಾಂಟೀನ್ ಉದ್ಘಾಟನೆ ► ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ಮಧ್ಯೆ ಜಟಾಪಟಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.09. ಬಂಟ್ವಾಳ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಕಾರ್ಯಕರ್ತರ ನಡುವೆ ಸಂಘರ್ಷ ಉಂಟಾಗಿದ್ದು, ಪೊಲೀಸರ ಸಕಾಲಿಕ ಕ್ರಮದಿಂದಾಗಿ ಹತೋಟಿಗೆ ಬಂದಿದೆ.

ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಬಾರದಂತೆ ಬಿಜೆಪಿ ಮುಖಂಡರು ತಹಶೀಲ್ದಾರ್ ಮೂಲಕ ಪೊಲೀಸರಿಗೆ ದೂರು ನೀಡಿದ್ದರೆನ್ನಲಾಗಿದ್ದು, ಇದನ್ನು ಕಾಂಗ್ರೆಸ್ ನಾಯಕರು ಪ್ರಶ್ನಿಸಿದ್ದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರ ನಡುವೆ ಜಟಾಪಟಿ ನಡೆದಿದೆ ಎನ್ನಲಾಗಿದೆ. ಮಾಜಿ ಸಚಿವ ಬಿ.ರಮಾನಾಥ ರೈ ಅವರು ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿ ಪರ ಘೋಷಣೆ ಕೂಗಿದ್ದು, ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿದ್ದಾರೆ.

Also Read  ಕಡಬ: ಇತ್ತೀಚೆಗೆ ನಿಧನರಾದ ಮೋಹನ ಗೌಡ ನೆಲ್ಲರವರಿಗೆ ಶ್ರದ್ದಾಂಜಲಿ ಸಭೆ

error: Content is protected !!
Scroll to Top