ಕಡಬ: ಮಾರ್ ಇವಾನಿಯೋಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಕಡಬ, ಡಿ.12. ಇಲ್ಲಿನ ಮಾರ್ ಇವಾನಿಯೋಸ್ ಪ್ರಥಮ ದರ್ಜೆ ಕಾಲೇಜು ಹಾಗೂ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ ವತಿಯಿಂದ ಕಡಬ ಪೇಟೆಯಾದ್ಯಂತ ಸ್ವಚ್ಛತಾ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.

ಅಕ್ಟೋಬರ್ 2ರ ಗಾಂಧಿ ಜಯಂತಿಯ ದಿನದಂದು ಕಡಬ ಗ್ರಾಮ ಪಂಚಾಯತ್‍ನ ಸಹಯೋಗದಲ್ಲಿ ಕಡಬ ಪೇಟೆಯಾದ್ಯಂತ ಅಂಗಡಿ ಮುಂಗಟ್ಟುಗಳ ಮುಂಭಾಗ ಹಾಗೂ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್, ಕಸ ಇನ್ನಿತರ ತ್ಯಾಜ್ಯವಸ್ತುಗಳನ್ನು ಹೆಕ್ಕಿ ಸಂಗ್ರಹಿಸಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಿದರು. ಕಾಲೇಜಿನ ಪ್ರಾಂಶುಪಾಲರಾದ ವಂ|ರೆ|ಫಾ| ಪಿಲಿಫ್ ನೆಲ್ಲಿವಿಳ ಹಾಗೂ ಉಪನ್ಯಾಸಕ ವೃಂದದವರ ಜೊತೆಗೆ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿದರು. ಸ್ವಚ್ಛತಾ ಕಾರ್ಯಕ್ರಮವನ್ನು ಸ್ಥಳೀಯ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಪಿ.ಪಿ. ವರ್ಗೀಸ್ ಅವರು ಉದ್ಘಾಟಿಸಿದರು. ಸ್ಥಳೀಯ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಫಜಲ್ ಕೋಡಿಂಬಾಳ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಬಾಬು ಮೊಗೇರ ಹಾಗೂ ಪಂಚಾಯತ್‍ನ ಎಲ್ಲಾ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗದವರು ಹಾಜರಿದ್ದು, ಮಾರ್ಗದರ್ಶನದೊಂದಿಗೆ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.

Also Read  ಇವಿ ಉತ್ಪಾದನೆಯಲ್ಲಿ ರಾಜ್ಯವನ್ನು ನಂ. 1 ಮಾಡುವ ಗುರಿ ಇದೆ  ➤ ಸಿಎಂ ಬೊಮ್ಮಾಯಿ..!

ಕಾರ್ಯಕ್ರಮದಲ್ಲಿ ಕಡಬದ ಎಸ್.ಕೆ.ಎಸ್.ಎಸ್.ಎಫ್ ಸಂಘಟನೆಯ ಪದಾಧಿಕಾರಿಗಳು ಮತ್ತು ಸದಸ್ಯರು ಕೈಜೋಡಿಸಿದ್ದು ಪಾನೀಯ ಹಾಗೂ ಲಘು ಉಪಹಾರದ ವ್ಯವಸ್ಥೆಯನ್ನು ಮಾಡಿ ಸಹಕರಿಸಿದರು.

error: Content is protected !!
Scroll to Top