(ನ್ಯೂಸ್ ಕಡಬ) newskadaba.com ಮಂಗಳೂರು, ಡಿ .17. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಾಗುವುದು. ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.

ಡಿಸೆಂಬರ್ 19 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ವಿಶೇಷ ತಹಶೀಲ್ದಾರರ ಕಚೇರಿ. ಡಿಸೆಂಬರ್ 20 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಕಚೇರಿ. ಡಿಸೆಂಬರ್ 21 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಂಟ್ವಾಳ ತಾಲೂಕು ಕಚೇರಿ ಬಂಟ್ವಾಳ. ಡಿಸೆಂಬರ್ 22 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಂಗಳೂರು ತಹಶೀಲ್ದಾರರ ಕಚೇರಿ. ಡಿಸೆಂಬರ್ 26 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಚೇರಿ. ಡಿಸೆಂಬರ್ 27 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪುತ್ತೂರು ತಾಲೂಕು ಕಚೇರಿ,ಇದಲ್ಲದೇ ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ.

ಅನಾಮಧೇಯ ಅರ್ಜಿಗಳು ಬಂದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಅರ್ಜಿದಾರರು ನಮೂನೆ I & IIರಲ್ಲಿ ಭರ್ತಿ ಮಾಡಿ ನೋಟರಿಯಿಂದ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಚೇರಿಗೆ ಅಥವಾ ನೇರವಾಗಿ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವಿ.ಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಅಧೀಕ್ಷಕರ ಕಚೇರಿ 0824-2429197, 9448390987 ಪೊಲೀಸ್ ಉಪಾಧೀಕ್ಷಕರ ಕಚೇರಿ – 0824 – 2453420/ 9886542369 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.