ಮಂಗಳೂರು: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ವೈದ್ಯಕೀಯ ಕಾಲೇಜು ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರದಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಮೈಸೂರು ಮೂಲದ ಅಮೃತ್ (23) ಎಂದು ಗುರುತಿಸಲಾಗಿದೆ. ನಗರದ ಪ್ರಸಿದ್ಧ ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿಯಾಗಿದ್ದ ಈತ ಕಳೆದ ಕೆಲವು ಸಮಯದಿಂದ ಮಾನಸಿಕ ಒತ್ತಡಕ್ಕೊಳಗಾಗಿದ್ದ ಎನ್ನಲಾಗಿದೆ. ಮಂಗಳವಾರ ಸಂಜೆ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top