(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 19 . ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಇಲ್ಲದಿರುವ ಕಾರಣ ಸಹಕಾರ ಕಾನೂನಿಗೆ ತಿದ್ದುಪಡಿ ತಂದು ಸ್ಥಳೀಯ ಸಂಸ್ಥೆಗಳ ಮಾದರಿಯಲ್ಲಿಯೇ ಮೀಸಲಾತಿ ನೀಡಬೇಕು ಎಂದು ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯು ಶಿಫಾರಸ್ಸುಮಾಡಿದೆ.
ಸಮಿತಿ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಕೆಳಮನೆಯಲ್ಲಿ ವರದಿಯನ್ನು ಮಂಡಿಸಿದರು. ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನೀಡದಿರುವ ಕಾರಣ ಎಸ್‌ಸಿ/ಎಸ್‌ಟಿ ಜನಾಂಗದವರು ಅವಕಾಶ ವಂಚಿತರಾಗುತ್ತಿದ್ದಾರೆ. ಹೀಗಾಗಿ ಸಹಕಾರ ಕಾನೂನಿಗೆ ತಿದ್ದುಪಡಿ ತಂದು ಸ್ಥಳೀಯ ಸಂಸ್ಥೆಗಳ ಮಾದರಿಯಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ವರದಿಯಲ್ಲಿ ತಿಳಿಸಲಾಗಿದೆ.