ನಾಳೆ (ಡಿ .22) ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ.

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21.    ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮಂಗಳೂರು ಇದರ ವತಿಯಿಂದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಡಿಸೆಂಬರ್ 22 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಹಾನಗರಪಾಲಿಕೆ ಕಟ್ಟಡ, ಲಾಲ್‍ಭಾಗ್, ಮಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ.   ಕಾರ್ಯಕ್ರಮದಲ್ಲಿ Mandovi Motors Pvt Ltd, Matrix Honda, Saggraha Management Pvt Ltd, Eurekha Forbes Ltd., BSL India Pvt Ltd, Arena. Animation ಕಂಪೆನಿಗಳು ಭಾಗವಹಿಸಲಿದ್ದು, ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿರುವರು.

ನೇರ ಸಂದರ್ಶನ ನಡೆಯುವ ಸ್ಥಳ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಹಾನಗರಪಾಲಿಕೆ ಕಟ್ಟಡ, ಲಾಲ್‍ಬಾಗ್, ಮಂಗಳೂರು. ಇಲ್ಲಿ ಬೆಳಿಗ್ಗೆ 10 ರಿಂದ ಅಪರಾಹ್ನ 3 ಗಂಟೆವರೆಗೆ . ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ., ಪದವಿ, ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ ವಿವರವುಳ್ಳ ಬಯೋಡಾಟಾ ಹಾಗೂ ಅಗತ್ಯ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು ದೂರವಾಣಿ ಸಂಖ್ಯೆ:9663079943ನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Also Read  ಹಜ್ಜಾಜ್ ಯಾತ್ರಾರ್ಥಿಗಳಿಗೆ ಚುಚ್ಚುಮದ್ದು ಲಸಿಕೆಗೆ ಚಾಲನೆ

 

error: Content is protected !!
Scroll to Top