ಕಡಬ: ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ

(ನ್ಯೂಸ್ ಕಡಬ) newskadaba.com ಕಡಬ, ಡಿ.21. ಬೈಕೊಂದು ಓವರ್ ಟೇಕ್ ಮಾಡುವ ಭರಾಟೆಯಲ್ಲಿ ಕೆಎಸ್ಸಾರ್ಟಿಸಿ ಬಸ್ಸಿಗೆ ಢಿಕ್ಕಿ ಹೊಡೆದ ಘಟನೆ ಶುಕ್ರವಾರ ಸಂಜೆ ಕಡಬದ ಕಳಾರ ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಬಳಿಯ ತಿರುವಿನಲ್ಲಿ ನಡೆದಿದೆ.

ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗೆ ಬಲ್ಯ ಕಡೆಗೆ ತೆರಳುತ್ತಿದ್ದ ಬೈಕೊಂದು ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್‌ ಸವಾರ ಬಲ್ಯ ನಿವಾಸಿ ವೆಂಕಟರಮಣ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಢಿಕ್ಕಿಯ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದ್ದು, ಬಸ್ ಚಾಲಕ ಬಸ್ಸನ್ನು ನಿಯಂತ್ರಿಸಿದ ಪರಿಣಾಮ ಬಸ್ ರಸ್ತೆ ಬದಿಯ ಚರಂಡಿಗೆ ಉರುಳುವುದನ್ನು ತಪ್ಪಿಸಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top