ಕುಮಾರಧಾರ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.22. ಇಲ್ಲಿನ ಕುಮಾರಧಾರಾ ನದಿಯಲ್ಲಿ ತೇಲಾಡುತ್ತಿದ್ದ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಕಂಡುಬಂದಿದ್ದು, ಶುಕ್ರವಾರದಂದು ನೀರಿಗೆ ಬಿದ್ದಿರಬಹುದೆಂದು ಶಂಕಿಸಲಾಗಿದೆ.

ಶನಿವಾರ ಬೆಳಿಗ್ಗೆ ಕುಮಾರಧಾರಾ ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ಕಂಡ ಸ್ಥಳೀಯರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಅದರಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ.ಅಪರಿಚಿತ ಮೃತದೇಹದ ಗುರುತು ಪತ್ತೆಹಚ್ಚಲಾಗುತ್ತಿದ್ದು, ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವುದಾ ಅಥವಾ ಆತ್ಮಹತ್ಯೆ ಮಾಡಿಕೊಂಡಿರುವುದಾ ಎಂದು ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ.

Scroll to Top