ಹಿರಿಯ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ವಿಧಿವಶ ► ಉಡುಪಿ ಜಿಲ್ಲೆಯ ಹೆಮ್ಮೆಯ ಪೊಲೀಸ್ ಅಧಿಕಾರಿ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.29. ಎಚ್1 ಎನ್ 1 ಸೋಂಕಿನಿಂದ ಬಳಲುತ್ತಿದ್ದ ರಾಜ್ಯದ ಐಪಿಎಸ್ ಅಧಿಕಾರಿ ಡಿಐಜಿ ಮಧುಕರ್ ಶೆಟ್ಟಿ ಶುಕ್ರವಾರ ರಾತ್ರಿ ಹೈದ್ರಾಬಾದ್ ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ನಿಧನರಾದರು.

ಖ್ಯಾತ ಪತ್ರಕರ್ತ ದಿವಂಗತ ವಡ್ಡರ್ಸೆ ರಘುರಾಮ್ ಶೆಟ್ಟಿ ಅವರ ಪುತ್ರ, 1999ರ ಬ್ಯಾಚ್‌ ಐಪಿಎಸ್ ಅಧಿಕಾರಿಯಾಗಿದ್ದ ಮಧುಕರ್ ಶೆಟ್ಟಿ ಕರ್ನಾಟಕದ ಉಡುಪಿ ಜಿಲ್ಲೆಯವರು. ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ ಸಮಾಜಶಾಸ್ತ್ರದಲ್ಲಿ ಎಂ.ಎ. ಮತ್ತು ನ್ಯೂಯಾರ್ಕ್ ನ ಯೂನಿವರ್ಸಿಟಿಯಲ್ಲಿ ಪಿ.ಎಚ್.ಡಿ ಪದವಿ ಪಡೆದಿದ್ದ ಇವರು ಚಿಕ್ಕಮಗಳೂರು ಎಸ್ಪಿಯಾಗಿ, ಲೋಕಾಯುಕ್ತ ಎಸ್ಪಿಯಾಗಿ ಖಡಕ್ ಹಾಗು ಜನಪರ ಅಧಿಕಾರಿಯಾಗಿ ಖ್ಯಾತಿ ಗಳಿಸಿದ್ದರು. ಮಧುಕರ ಶೆಟ್ಟಿಯವರ ನಿಧನದ ವಿಚಾರವನ್ನು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್ ಮಹಾ ನಿರ್ದೇಶಕ ಕಮಲ್ ಪಂತ್ ಖಚಿತಪಡಿಸಿದ್ದಾರೆ.

Also Read  ನೋಯ್ಡಾ ಪೊಲೀಸರ ಬಲೆಗೆ ಏಲಿಯನ್.!

error: Content is protected !!
Scroll to Top